

ಬೆಂಗಳೂರು: ವಿಶ್ವದಲ್ಲಿಯೇ ಕರ್ನಾಟಕ ಶ್ರೇಷ್ಠ ಪ್ರವಾಸಿ ತಾಣವಾಗಿ ಗುರುತಿಸಿಕೊಳ್ಳುವಂತಾಗಬೇಕು ಎಂಬುದು ನಮ್ಮ ಗುರಿ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರವಾಸೋದ್ಯಮ ನೀತಿ 2024-29ನ್ನು ಜಾರಿಗೆ ತರುವ ಕುರಿತು ಚರ್ಚಿಸುವ ಸಂಬಂಧ ನಗರದ ಖಾಸಗಿ ಹೋಟೆಲ್ನಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕದ ಪ್ರವಾಸೋದ್ಯಮ ಹಾಗೂ ಉದ್ಯಮದ ಭವಿಷ್ಯ ರೂಪಿಸಲು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಸಾಂಸತಿಕ, ವೈವಿಧ್ಯಮಯ ಭೂದೃಶ್ಯಗಳು, ಕಲೆ, ಸಂಸತಿ ಮತ್ತು ಐತಿಹಾಸಿಕ ಶೀಮಂತಿಕೆಯನ್ನು ರಾಜ್ಯ ಹೊಂದಿದೆ. ಮುಂದಿನ ಪೀಳಿಗೆಗೆ ಪ್ರವಾಸೋದ್ಯಮದಲ್ಲಿ ಆಸಕ್ತಿ ಮೂಡಿಸಿ, ಈ ಕುರಿತು ಮಾಹಿತಿ ನೀಡುವುದು ಎಲ್ಲರ ಜವಾಬ್ದಾರಿಯಾಗಿದೆ. ಇತ್ತೀಚಿಗೆ ಜನರು ಐಷಾರಾಮಿ ಪ್ರವಾಸಕ್ಕೆ ಮಹತ್ವ ನೀಡುತ್ತಿದ್ದಾರೆ. ಅದರ ಜೊತೆಗೆ ಕಲೆ ಮತ್ತು ಸಾಂಸ್ಕೃತಿಕ ಸಂಪತ್ತಿನ ಬಗ್ಗೆ ಪ್ರವಾಸಿಗರಿಗೆ ಅರಿವು ಮೂಡಿಸಿದರೆ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕರಾವಳಿ ಪ್ರದೇಶದ ಅಭಿವೃದ್ಧಿಯ ಮಹತ್ವಾಕಾಂಕ್ಷೆಯಾಗಿದ್ದು, ಈ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಪ್ರವಾಸೋದ್ಯಮ ಇಲಾಖೆಯ ಇತ್ತೀಚಿಗೆ ಆಯೋಜಿಸಿದ್ದ ದಣ ಭಾರತ್ ಉತ್ಸವದಲ್ಲಿ ಹೂಡಿಕೆದಾರರು ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದು, ಪ್ರವಾಸೋದ್ಯಮ ನೀತಿಯು ಹೆಚ್ಚಿನ ಹೂಡಿಕೆ, ಹೆಚ್ಚಿನ ಆದಾಯ ಮತ್ತು ಉದ್ಯೋಗ ಸೃಷ್ಟಿಗೆ ಕಾರಣವಾಗುತ್ತದೆ ಎಂದರು.
ಪರಿಷ್ಕೃತ ಪ್ರವಾಸೋದ್ಯಮ ನೀತಿಯು ರಾಜ್ಯವನ್ನು ಉನ್ನತ ಶ್ರೇಣಿಯ ಪ್ರವಾಸೋದ್ಯಮ ತಾಣವಾಗಿಸುತ್ತದೆ. ಈ ನಿಟ್ಟಿನಲ್ಲಿ ಹೂಡಿಕೆ, ಮೂಲಸೌಕರ್ಯ, ಪರಂಪರೆ, ತಂತ್ರಾನದ ಕಡೆಗೆ ಗಮನ ಹರಿಸಲಾಗುತ್ತಿದೆ. ಇಲಾಖೆ, ಸಾರ್ವಜನಿಕ&ಖಾಸಗಿ ಪಾಲುದಾರಿಕೆಗಳು ಒಟ್ಟಾಗಿ ಪ್ರವಾಸೋದ್ಯಮದ ಬೆಳವಣಿಗೆಗೆ ಹೆಜ್ಜೆ ಇಡಬೇಕಾಗಿದೆ ಎಂದರು.
ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಮ್, ನಿರ್ದೇಶಕ ಡಾ.ವಿ.ರಾಮ್ಪ್ರಸಾತ್ ಮನೋಹರ್ ಇನ್ನಿತರರಿದ್ದರು.