

ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಶೇ.50 ಹೆಚ್ಚಿದೆ. ಸಾಕಷ್ಟು ತಾಣಗಳಲ್ಲಿ ಹೆಚ್ಚಿನ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಅವಕಾಶವಿದೆ. ದಣ ಭಾರತ ಉತ್ಸವದ ಮೂಲಕ ಹರಿದು ಬಂದಿರುವ ಸುಮಾರು 4,200 ಕೋಟಿ ರೂ. ಹೂಡಿಕೆ ಜತೆಗೆ, ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಬಳಸುವಂತೆ ಪ್ರವಾಸೋದ್ಯಮ ಹಾಗೂ ಕಾನೂನು ಸಚಿವ ಡಾ.ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾಸಂಸ್ಥೆ (ಎ್ಕೆಸಿಸಿಐ) ಹಾಗೂ ಪ್ರವಾಸೋದ್ಯಮ ಇಲಾಖೆ ಅರಮನೆ ಮೈದಾನದ ಪ್ರಿನ್ಸೆಸ್ ಶ್ರೈನ್ನಲ್ಲಿ ಆಯೋಜಿಸಿದ್ದ 'ದಕ್ಷಿಣ ಭಾರತ ಉತ್ಸವ'ದ ಸಮಾರೋಪ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು.
ದಕ್ಷಿಣ ಭಾರತ ರಾಜ್ಯಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ದಿಗೆ ವಿಫುಲ ಅವಕಾಶಗಳಿವೆ. ಹೂಡಿಕೆಯನ್ನು ಪೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಿರುವ "ದಣ ಭಾರತ ಉತ್ಸವ' ಕಾರ್ಯಕ್ರಮ ಮಹತ್ವದ್ದಾಗಿದೆ. ಈ ಉತ್ಸವದ ಮೂಲಕ ಸುಮಾರು 4,200 ಕೋಟಿ ರೂ. ಹೂಡಿಕೆಯ ಪ್ರಸ್ತಾವನೆಗಳಿಗೆ ಒಡಂಬಡಿಕೆಯಾಗಿದೆ.
ಶಕ್ತಿ ಯೋಜನೆಯ ಅನುಷ್ಠಾನದ ನಂತರ ರಾಜ್ಯದಲ್ಲಿ ಎಲ್ಲಾ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಶೇ.50 ರಷ್ಟು ಹೆಚ್ಚಾಗಿದೆ. ಈ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವುದು ಕೇವಲ ಸರ್ಕಾರದಿಂದ ಸಾಧ್ಯವಿಲ್ಲ. ಇಲ್ಲಿ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಇಲ್ಲಿನ ಹೂಡಿಕೆಯಿಂದ ಬಹಳಷ್ಟು ಉಪಯೋಗವನ್ನು ಉದ್ದಿಮೆದಾರರು ಪಡೆದುಕೊಳ್ಳಬಹುದಾಗಿದೆ. ಪ್ರವಾಸೋದ್ಯಮ ಎಂದರೆ ಕೇವಲ ಲಕ್ಸುರಿ ಪ್ರವಾಸೋದ್ಯಮ ಅಲ್ಲ, ಸಾಮಾನ್ಯ ಜನರ ಪ್ರವಾಸೋದ್ಯಮಕ್ಕೂ ಸರ್ಕಾರ ಆದ್ಯತೆ ನೀಡುತ್ತದೆ ಎಂದು ತಿಳಿಸಿದರು.
ಎಫ್ಕೆಸಿಸಿಐ ಅಧ್ಯ ರಮೇಶ್ ಚಂದ್ರ ಲಹೋಟಿ ಮಾತನಾಡಿ, ದಣ ಭಾರತ ರಾಜ್ಯಗಳನ್ನು ಒಂದೇ ವೇದಿಕೆಯಡಿಯಲ್ಲಿ ತರುವ ಪ್ರಯತ್ನಕ್ಕೆ ಯಶಸ್ಸು ದೊರೆತಿದೆ. ಕೈಗಾರಿಕಾ ಉತ್ಪಾದನೆ, ಕೃಷಿಯ ನಂತರ ಹೆಚ್ಚಿನ ಉದ್ಯೋಗಾವಕಾಶಗಳನ್ನು ಮತ್ತು ಹೂಡಿಕೆಯ ಅವಕಾಶ ಇರುವುದು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಂಡವಾಳ ಹೂಡಿಕೆಗೆ ಮುಂದಾದ ಉದ್ದಿಮೆದಾರರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ ಪಾಟೀಲ್ ಒಡಂಬಡಿಕೆ ಪತ್ರಗಳನ್ನು ವಿತರಿಸಿದರು.
ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಸೇರಿದಂತೆ ಪದಾಧಿಕಾರಿಗಳು ಇದ್ದರು.