ಸಚಿವ ಎಚ್ ಕೆ ಪಾಟೀಲ ಅವರಿಂದ ಮಳೆಗೆ ಹಾನಿಗೊಳಗಾದ ಮನೆಗಳಿಗೆ ಬೇಟಿ

AA
AA
Published on
ಗದಗ:ಗದಗ ನಗರದ ವಾರ್ಡ್ ನಂಬರ್ 30ರಲ್ಲಿ ಮಳೆಹಾನಿಗೊಳಗಾದ ಪ್ರದೇಶಗಳಿಗೆ ರಾಜ್ಯದ ಕಾನೂನು, ನ್ಯಾಯ ಮಾನನ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಬೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ ಶಾಶ್ವತ ಪರಿಹಾರ ಕಲ್ಪಿಸುವ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಾಬೀವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರ್ ಸಾನ ಬಬರ್ಚಿ,ಪ್ರಭು ಬುರಬುರೆ,ವ್ಯಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಪಿರಸಾಬ ಕೌತಾಳ,ಬಿ.ಬಿ.ಅಸೂಟಿ, ಉಪವಿಭಾಗಾಧಿಕಾರಿ ಗಂಗಪ್ಪ, ಗದಗ ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ,ಸ್ಲಂ ಬೋರ್ಡ್ ಅಧಿಕಾರಿಗಳು ,ನಗರಸಭೆ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net