ತಾಲ್ಲೂಕಿನ ದೊಡ್ಡಕಾಡನೂರು ಗ್ರಾಮದಲ್ಲಿ ಮಂಗಳವಾರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪೋಲೀಸ್ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಮದ್ಯ ವ್ಯಸನ ಮುಕ್ತಿ ಕೇಂದ್ರ ಹಾಸನ ಮತ್ತು ಹೊಳೆನರಸೀಪುರ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕೇಂದ್ರ ಮತ್ತು ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು ದೊಡ್ಡಕಾಡನೂರು ಇವರ ಸಂಯುಕ್ತ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯಡಿ ಮದ್ಯ ಮತ್ತು ಮಾದಕ ವಸ್ತುಗಳು, ಅವುಗಳ ದುರ್ಬಳಕೆ ಮತ್ತು ದುಷ್ಪರಿಣಾಮಗಳು ಹಾಗೂ ಪುನರ್ವಸತಿ ಕುರಿತು ಜಾಗೃತಿ, ಜಾತಾ ಹಾಗೂ ಪ್ರತಿಜ್ಞಾವಿಧಿ ಬೋಧನೆ ಕಾರ್ಯಕ್ರಮ ನಡೆಯಿತು.