

ಮಂಡ್ಯ: ಇಂದಿನ ಸ್ಪರ್ಧಾತ್ಮಕ ಜಗತ್ತನ್ನು ಎದುರಿಸಲು ಮಾನಸಿಕ ಸದೃಢತೆ ಅಗತ್ಯ ಎಂದು ಮಂಡ್ಯ ತಾಲೂಕು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಾಜಿಗೌಡ ಹೇಳಿದರು.
ತಾಲೂಕಿನ ಮುತ್ತೆಗೆರೆ ಗ್ರಾಮದಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಬಸರಾಳು ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ ಜ್ಯೋತಿ ಸ್ವೀಕರಿಸಿ ಮಾತನಾಡಿದ ಅವರು, ಕ್ರೀಡೆಯಿಂದ ಶಿಸ್ತು, ಸಂಯಮ, ಸಮಯ ಪಾಲನೆಯನ್ನು ರೂಢಿಸಿಕೊಳ್ಳಬಹುದು ಎಂದರು.
ಕ್ರೀಡಾಕೂಟ ಉದ್ಘಾಟಿಸಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ್ ಮಾತನಾಡಿ, ಇಂದು ಚಿಕ್ಕ ಮಕ್ಕಳಿಗೆ ಹೃದಯಾಘಾತವಾಗುತ್ತಿದೆ. ಇದಕ್ಕೆ ಕಾರಣ ಆಟಗಳಲ್ಲಿ ತೊಡಗಿಸಿಕೊಳ್ಳದೆ ಬರೀ ಮೊಬೈಲ್ ದಾಸರಾಗಿರುವುದೇ ಕಾರಣ ಎಂದರು.
ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ರಮೇಶ್ ವಹಿಸಿದ್ದರು. ಎಸ್‌ಡಿಎಂಸಿ ಗೌರವಾಧ್ಯಕ್ಷ ಹೇಮಂತ್‌ಕುಮಾರ್, ಗ್ರಾಪಂ ಸದಸ್ಯರಾದ ಹೊನ್ನೇಗೌಡ, ಶಿವಕುಮಾರ್, ರೂಪಾ, ಬಿಇಒ ಕೆ.ಟಿ.ಸೌಭಾಗ್ಯ, ಮುಖಂಡರಾದ ಯತಿರಾಜ್, ಸುಜಾತಾ ರಮೇಶ್, ಬೋರೇಗೌಡ ಇತರರಿದ್ದರು.