ಕ್ರೀಡಾ ಜ್ಯೋತಿ ಸಂಚಾರ ಆರಂಭ

hockey
Published on

ಮಡಿಕೇರಿ:

ಮುದ್ದಂಡ ಕಪ್ ಹಾಕಿ ಉತ್ಸವದ ಕ್ರೀಡಾಜ್ಯೋತಿಯನ್ನು ಕೊಡವ ಹಾಕಿ ಹಬ್ಬದ ಜನಕ ದಿ.ಪಾಂಡAಡ ಕುಟ್ಟಪ್ಪ ಅವರ ಕರಡ ಗ್ರಾಮದ ಪಾಂಡAಡ ಕುಟುಂಬದ ಐನ್ ಮನೆಯಲ್ಲಿ ಮಂಗಳವಾರ ಉದ್ಘಾಟಿಸಲಾಯಿತು. ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿ ಮತ್ತು ಕೊಡವ ಹಾಕಿ ಅಕಾಡೆಮಿಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮತ್ತು ಕೊಡವ ಹಾಕಿ ಹಬ್ಬದ ಜನಕ ದಿ.ಪಾಂಡAಡ ಕುಟ್ಟಪ್ಪ ಅವರ ಪತ್ನಿ ಲೀಲಾ ಕುಟ್ಟಪ್ಪ ಕ್ರೀಡಾಜ್ಯೋತಿ ಉದ್ಘಾಟಿಸಿದರು.

ನಂತರ ಮಾತನಾಡಿದ ಪೊನ್ನಣ್ಣ, ಕೊಡಗಿನ ಜನತೆಯ ಪ್ರಮುಖ ಕಾರ್ಯಚಟುವಟಿಕೆಗಳಲ್ಲಿ ಕ್ರೀಡೆಯೂ ಒಂದಾಗಿದ್ದು, ಬೆಳ್ಳಿ ಮಹೋತ್ಸವ ಆಚರಣೆ ಸಂದರ್ಭದಲ್ಲಿ ಮುದ್ದಂಡ ಹಾಕಿ ಉತ್ಸವ ಅತ್ಯಂತ ಯಶಸ್ಸು ಕಂಡು ಇತರರಿಗೆ ಮಾದರಿಯಾಗಲಿ.

ಹಾಕಿ ಕ್ರೀಡಾಕೂಟದಲ್ಲಿ ಒಂದು ವಿಭಿನ್ನ ರೀತಿಯ ಪ್ರಯೋಗವನ್ನು ಮಾಡುತ್ತಿರುವ ಮುದ್ದಂಡ ಹಾಕಿ ಉತ್ಸವದ ಆಯೋಜಕರ ಪ್ರಯತ್ನ ಶ್ಲಾಘನೀಯ. ಮುಂದಿನ ತಿಂಗಳಾAತ್ಯದವರೆಗೆ ನಡೆಯುವ ಹಾಕಿ ಉತ್ಸವ ನಾಡಿನ ಯುವ ಹಾಕಿಪಟುಗಳ ಪ್ರತಿಭೆ ಅನಾವರಣಗೊಳಿಸುವ ವೇದಿಕೆಯಾಗಲಿ. ಹಾಕಿ ಹಬ್ಬದ ಜನಕ ಪಾಂಡAಡ ಕುಟ್ಟಪ್ಪ ಪುತ್ಥ್ತಳಿಯನ್ನು ನಿರ್ಮಿಸಬೇಕು ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಬೇಡಿಕೆಯನ್ನಿಟ್ಟಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಮುದ್ದಂಡ ಹಾಕಿ ಹಬ್ಬದ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಉಪಾಧ್ಯಕ್ಷ ಡೀನ್ ಬೋಪಣ್ಣ, ಕಾರ್ಯದರ್ಶಿ ಆದ್ಯ ಪೂವಣ್ಣ, ಗೌರವಾಧ್ಯಕ್ಷ ಮುದ್ದಂಡ ಬಿ.ದೇವಯ್ಯ, ಪಟ್ಟೆದಾರ ಡಾಲಿ ತಿಮ್ಮಯ್ಯ, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಕೆ.ಬೋಪಣ್ಣ, ಕಾರ್ಯಾಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ, ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಪ್ರಮುಖರಾದ ಪಾಂಡAಡ ಮೊಣ್ಣಪ್ಪ, ಮುದ್ದಂಡ ತಿಮ್ಮಯ್ಯ, ಮುದ್ದಂಡ ಕುಟುಂಬಸ್ಥರು ಹಾಗೂ ಪಾಂಡAಡÀ ಕುಟುಂಬಸ್ಥರು ಇದ್ದರು.

ಪಾಂಡAಡ ಕುಟುಂಬದ ಐನ್ ಮನೆಯ ನಂತರ ಕಿರುಗೂರು ಚೆಪ್ಪುಡಿರ, ಅಲಮೇಂಗಡ, ಟಿ.ಶೆಟ್ಟಿಗೇರಿ - ಒಂಟಿಯAಗಡಿ ಮಚ್ಚಮಾಡ, ಚೆಕ್ಕೇರ, ಕಳ್ಳಿಚಂಡ, ಕುಂದ ಮನೆಯಪಂಡ, ನಾಂಗಾಲ ಕುಪ್ಪಂಡ ಐನ್ ಮನೆಗಳಿಗೆ ಕೊಡಗಿನ ಮ್ಯಾರಥಾನ್ ಪಟುಗಳು ಕ್ರೀಡಾಜ್ಯೋತಿಯೊಂದಿಗೆ ಸಾಗಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net