

ಕುಶಾಲನಗರ: ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಯಿಂದ ಕೂಡಿಗೆಯ ಸರ್ಕಾರಿ ಕ್ರೀಡಾಶಾಲೆಯಲ್ಲಿ ಭಾನುವಾರ ಮೈಸೂರು ವಿಭಾಗ ಮಟ್ಟದ ಶಾಲಾ ಮಕ್ಕಳ ಹಾಕಿ ಟೂರ್ನಿ ನಡೆಯಿತು.
ಟೂರ್ನಿಯಲ್ಲಿ ಮೈಸೂರು ವಿಭಾಗದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕರು ಮತ್ತು ಬಾಲಕಿಯರ ತಂಡಗಳು ಪಾಲ್ಗೊಂಡಿದ್ದವು.
ಇಂದಿನಿಂದ ರಾಜ್ಯಮಟ್ಟ:
ಕೂಡಿಗೆ ಸರ್ಕಾರಿ ಕ್ರೀಡಾಶಾಲಾ ಹಾಕಿ ಟರ್ಫ್ ಮೈದಾನದಲ್ಲಿ ಅ.9, 10ರಂದು ಬೆಳಗ್ಗೆ 10.00 ಗಂಟೆಗೆ ರಾಜ್ಯ ಮಟ್ಟದ ಹಾಕಿ ಟೂರ್ನಿ ಆಯೋಜಿಸಲಾಗಿದೆ.