ಸಂಪುಟ ವಿಸ್ತರಣೆಯಾದರೆ ಸರ್ಕಾರ ಪಥನ

HLK ANJANEYA 24
Published on

ಹೊಳಲ್ಕೆರೆ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾದಲ್ಲಿ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಶುರುವಾಗಿ ಸರ್ಕಾರ ಪಥನವಾಗಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಭವಿಷ್ಯ ನುಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕರ್ತರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಅನ್ಯಪಕ್ಷಗಳ ಜನಪ್ರತಿನಿಧಿಗಳನ್ನು ಕರೆತಂದು ಸರ್ಕಾರ ರಚಿಸಿರುವ ಬಿಜೆಪಿಯಲ್ಲಿ ಭಿನ್ನಮತ ಉಂಟಾಗುವುದು ಖಚಿತ. ಯಾವುದೇ ಸಮಯದಲ್ಲಾದರೂ ಚನಾವಣೆ ಬರುವ ಸಾಧ್ಯತೆ ಇದೆ ಎಂದರು.

ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳಿಂದ ಜನರು ಭ್ರಮನಿರಸನಗೊಂಡಿದ್ದಾರೆ. ಬರುವ ದಿನಗಳಲ್ಲಿ ರಾಜ್ಯ ಸೇರಿ ದೇಶದಲ್ಲಿ ಜನರು ಕಾಂಗ್ರೆಸ್‌ನತ್ತ ವಾಲುತ್ತಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಹಂಬಲಿಸುತ್ತಿದ್ದಾರೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ, ಮುಖಂಡರಾದ ಕೆ.ಎಂ.ಶಿವಕುಮಾರ್, ಹಾಲೇಶ್, ಗೋಡೆಮನೆ ಹನುಮಂತಪ್ಪ, ಬಾಲು ಪ್ರಕಾಶ್, ಅಲಿಮುಲ್ಲಾ ಷರೀಫ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net