ಚುನಾವಣೆಗೆ ರಾಜಕಾರಣ ಸೀಮಿತ

HLK MLA 04
Published on

ಹೊಳಲ್ಕೆರೆ: ಅಭಿವೃದ್ಧಿ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಂಗಳವಾರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಚುನಾವಣೆ ವೇಳೆ ಮಾತ್ರ ರಾಜಕಾರಣ ಮಾಡಬೇಕು. ಬಳಿಕ ಕ್ಷೇತ್ರದ ಅಭಿವೃದ್ಧಿಗೆ ಗಮನ ಹರಿಸುವುದು ನನ್ನ ಸಿದ್ದಾಂತ ಎಂದರು.

ಯಾವುದೇ ಜಾತಿಗೆ ಸೀಮಿತವಾಗದೆ ಕ್ಷೇತ್ರ ಪ್ರಗತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ತಾಲೂಕಿನ ಕುಮ್ಮಿನಘಟ್ಟ ಗ್ರಾಮದಿಂದ ತಿಮ್ಮಪ್ಪನ ಗುಡ್ಡದ ವರಗಿನ ರಸ್ತೆ ಅಭಿವೃದ್ಧಿ 30 ಲಕ್ಷ ರೂ. ಶಿವಗಂಗದಿಂದ ಜಾನಕಲ್ ವರೆಗಿನ ರಸ್ತೆಗೆ 1.6 ಕೋಟಿ ರೂ. ಅನುದಾನ ನೀಡಲಾಗಿದೆ. ಹಲವು ರಸ್ತೆಗಳ ಅಭಿವೃದ್ಧಿ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ರೈತರ ಸಮಸ್ಯೆ ಅರ್ಥ ಮಾಡಿಕೊಂಡು ಕೆರೆಗಳಿಗೆ ನೀರು ತುಂಬಿಸುವ ಕೆಲಸ ಆದಷ್ಟು ಬೇಗ ಮಾಡುತ್ತೇನೆ. 67 ಕೋಟಿ ರೂ. ವೆಚ್ಚದ ಯೋಜನೆಗೆ ಸರ್ಕಾರದಿಂದ ಮಂಜೂರಾತಿ ಪಡೆದು ಟೆಂಡರ್ ಕರೆಯಲಾಗಿದೆ. ಫೆ.24ರ ಒಳಗೆ ಕೆಲಸ ಪ್ರಾರಂಭವಾಗಲಿವೆ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಎಲ್.ಬಿ.ರಾಜಶೇಖರ್, ಶಿವಗಂಗ ಗ್ರಾಪಂ ಅಧ್ಯಕ್ಷೆ ಸುಶೀಲಬಾಯಿ, ರಾಜಪ್ಪ, ಚಂದ್ರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net