ಅನಧಿಕೃತ ಪೆಟ್ಟಿಗೆ ಅಂಗಡಿಗಳ ತೆರವು

HLK CORONA 24
Published on

ಹೊಳಲ್ಕೆರೆ: ಜಿಲ್ಲಾಧಿಕಾರಿ ಹಾಗೂ ಯೋಜನಾ ನಿರ್ದೇಶಕರ ಸೂಚನೆಯಂತೆ ಮಂಗಳವಾರ ರಸ್ತೆ ಬದಿ ಅನಧಿಕೃತವಾಗಿ ತೆರೆಯಲಾಗಿದ್ದ ಪೆಟ್ಟಿಗೆ ಅಂಗಡಿಗಳನ್ನು ಪಟ್ಟಣ ಪಂಚಾಯಿತಿಯಿಂದ ತೆರವುಗೊಳಿಸಲಾಯಿತು.

ಕರೊನಾ ಸೋಂಕು ಹರಡದಿರಲೆಂದು ಪಟ್ಟಣದ ಎಲ್ಲ ಸರ್ಕಾರಿ ಕಟ್ಟಡಗಳು, ಖಾಸಗಿ ಬಸ್ ನಿಲ್ದಾಣ, ಪ್ರಮುಖ ರಸ್ತೆ ಹಾಗೂ ಎಲ್ಲ ವಾರ್ಡ್‌ಗಳು, ಸಾರ್ವಜನಿಕ ಪ್ರದೇಶಗಳಲ್ಲಿ ಕೀಟನಾಶಕ ಸಿಂಪಡಿಸಲಾಯಿತು.

ಪಪಂ ಮುಖ್ಯಾಧಿಕಾರಿ ಎ. ವಾಸೀಂ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net