ನಿತ್ಯ ಜೀವನದಲ್ಲಿರಲಿ ಜಾಗರೂಕತೆ

K HALLI SSLC 24
Published on

ಹೊಳಲ್ಕೆರೆ: ಕರೊನಾ ಹರಡುತ್ತಿರುವ ಸಂದರ್ಭದಲ್ಲಿ ನಾವು ನಮ್ಮ ನಿತ್ಯ ಜೀವನವನ್ನು ಜಾಗರೂಕತೆಯಿಂದ ನಿರ್ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ ತಿಳಿಸಿದರು.

ಪಟ್ಟಣದ ಬಿಆರ್‌ಸಿ ಕಚೇರಿಯಲ್ಲಿ ಮಂಗಳವಾರ ತಾಲೂಕು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಆಯೋಜಿಸಿದ್ದ ಮಾಸ್ಕ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

ಕೋವಿಡ್-19 ನಡುವೆಯೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಪರೀಕ್ಷೆ ಕೈಗೊಂಡಿದೆ. ಅನ್ಯ ರಾಜ್ಯಗಳಲ್ಲಿ ಪರೀಕ್ಷೆಗಳನ್ನು ರದ್ದು ಮಾಡಿವೆ. ಆದರೆ, ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳೊಂದಿಗೆ ಈ ನಿರ್ಧಾರ ತೆಗೆದುಕೊಂಡಿದೆ ಎಂದರು.

ಕಾರ್ಯದರ್ಶಿ ಮೋಹನ್‌ಕುಮಾರ್ ಜಾದು ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದಿಂದ ಕರೊನಾ ವಿರುದ್ಧ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದರು.

ಸಂಸ್ಥೆಯ ಸಹಾಯಕ ಆಯುಕ್ತ ವಿಜಯಕುಮಾರ್ ಮಾತನಾಡಿ, ಕೋವಿಡ್-19 ಹಿನ್ನೆಲೆಯಲ್ಲಿ ಜನಜಾಗೃತಿ ಜತೆಯಲ್ಲಿ ಸಾಕಷ್ಟು ಸಾಮಾಜಿಕ ಸೇವೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಎಡಿಸಿ ರೇಖಾ ವೀರಭದ್ರಪ್ಪ, ಬಿಅರ್‌ಸಿ ಸಮನ್ವಯಾಧಿಕಾರಿ ತಿಪ್ಪೇಸ್ವಾಮಿ, ಉಪಾಧ್ಯಕ್ಷ ಗಂಗಾಧರಪ್ಪ, ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶೇರ್ ಅಲಿ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಪ್ಪ, ಶಿಕ್ಷಕ ಡಾ.ಡಿ.ಕಲ್ಲೇಶ್, ಗಿರಿಜಮ್ಮ, ಕುಮಾರ್, ಸುರೇಶ್, ವಿಜಯಕುಮಾರ್, ಸಂಸ್ಥೆಯ ಉಪಾಧ್ಯಕ್ಷ ಎಸ್.ವೇದಮೂರ್ತಿ, ರೋವರ್ಸ್‌ ಚೇತನ್, ಚಂದನ್, ಸುನೀಲ್, ಮೀನಾಕ್ಷಿ ಮತ್ತಿತರರು ಇದ್ದರು.

ಕೊಂಡ್ಲಹಳ್ಳಿ: ಪ್ರದೇಶ ಕುರುಬರ ಸಂಘದ ನಿರ್ದೇಶಕ ಎಸ್.ಕೆ.ಗುರುಲಿಂಗಪ್ಪ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿತರಿಸಲು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಮಾಸ್ಕ್‌ಗಳನ್ನು ನೀಡಿದರು. ಮುಖ್ಯ ಅಧಿಕ್ಷಕ ಸಿಎಂಎಸ್ ತಿಪ್ಪೇಸ್ವಾಮಿ, ಉಪ ಅಧೀಕ್ಷಕ ಎ.ಮಹಂತೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net