ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ

HLK DSS
Published on

ಹೊಳಲ್ಕೆರೆ: ಸ್ವಾತಂತ್ರೃ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಯತ್ನಾಳ್ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಮಂಗಳವಾರ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಕೆ. ನಾಗರಾಜ್‌ಗೆ ಮನವಿ ಸಲ್ಲಿಸಿದರು.

ದೇಶ, ಭಾಷೆ, ಸ್ವಾತಂತ್ರೃ ಹೋರಾಟಗಾರನ ಬಗ್ಗೆ ಹಗುರವಾಗಿ ಮಾತನಾಡಿದರೂ ಯಾವುದೇ ಕ್ರಮ ಜರುಗಿಸದಿರುವುದು ಬೇಸರ ಮೂಡಿಸಿದೆ. ಕೂಡಲೇ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಗೃಹ ಮಂತ್ರಿಗಳು ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ದಸಂಸ ಜಿಲ್ಲಾಧ್ಯಕ್ಷ ಕೆಂಗುಂಟೆ ಜಯಣ್ಣ, ತಾಲೂಕು ಅಧ್ಯಕ್ಷ ಮದ್ದೇರು ನವೀನ್, ಶಿವಣ್ಣ, ಶ್ರೀನಿವಾಸ್, ಮಂಜು ಪ್ರಸನ್ನ, ಲಿಂಗರಾಜು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net