ಸಾಮಾಜಿಕ ನ್ಯಾಯ ಸಂವಿಧಾನದ ಆಶಯ

HLK KANUNU 22
Published on

ಹೊಳಲ್ಕೆರೆ: ಸಾಮಾಜಿಕ ನ್ಯಾಯ ಎಂದಾಕ್ಷಣ ನಮಗೆ ಸಂವಿಧಾನ, ಅಸ್ಪೃಶ್ಯತೆಯ ನಿವಾರಣೆ, ದಲಿತೋದ್ಧಾರದ ಹೋರಾಟ ನೆನಪಾಗುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಪ್ರೇಮಾ ವಸಂತರಾವ್ ಪವಾರ್ ಹೇಳಿದರು.

ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯಿಂದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಹಾಗೂ ಬಡತನ ನಿರ್ಮೂಲನೆ ಕುರಿತು ಪಟ್ಟಣದ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದ ಸಂವಿಧಾನ ಸಾಮಾಜಿಕ ನ್ಯಾಯದ ಪರಿಕಲ್ಪನೆಯಿಂದ ರಚಿತವಾಗಿದೆ. ರಾಷ್ಟ್ರದ ಅಭಿವೃದ್ಧಿಗೆ ಅದು ಅವಶ್ಯ. ದೇಶದ ಒಳಗೆ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಸಾಮಾಜಿಕ ನ್ಯಾಯ ಆಧಾರವಾಗಿದೆ ಎಂದರು.

2007ರ ಫೆಬ್ರವರಿ 20ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸಾಮಾಜಿಕ ನ್ಯಾಯ ದಿನ ಅಂಗೀಕರಿಸಲಾಯಿತು. ದುರ್ಬಲರು ಮತ್ತು ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಕಾನೂನಿನಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ತಿಳಿಸಿದರು.

ವಕೀಲ ಎಸ್.ವಿಜಯ್ ಕಾಲ್ಕೆರೆ, ಸಿಡಿಪಿಒ ಪಿ.ಲೋಕೇಶ್, ವಕೀಲರ ಸಂಘದ ಅಧ್ಯಕ್ಷ ಜಿ.ಇ.ರಂಗಸ್ವಾಮಿ ಮಾತನಾಡಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ವಿ.ರವಿಕುಮಾರ್, ಅಪರ ಸಿವಿಲ್ ನ್ಯಾಯಾಧೀಶ ಎನ್.ಎ.ನಾಗೇಶ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ್, ಮಮತಾ, ರಮಾಬಾಯಿ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net