ಸಾಮಾಜಿಕ ಅಂತರ ಅವಶ್ಯ

HD PURA VITARANE 08 (1)
Published on

ಹೊಳಲ್ಕೆರೆ: ಕರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಸರ್ಕಾರ ಕೈಗೊಂಡಿರುವ ಮುಂಜಾಗ್ರತೆ ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.

ತಾಲೂಕಿನ ಎಚ್‌ಡಿ ಪುರ ಗ್ರಾಮದಲ್ಲಿ ತಲಾ 500 ರೂ. ಗಳಂತೆ 600 ಜನರಿಗೆ ವಿತರಿಸಲು ಹಣ ನೀಡಿ ಮಾತನಾಡಿ, ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಆತ್ಮವಿಶ್ವಾಸ ತುಂಬುವುದರ ಜತೆಗೆ ಸೋಂಕು ಹರಡುವುದನ್ನು ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಜಿಪಂ ಸದಸ್ಯ ತಿಪ್ಪೇಸ್ವಾಮಿ, ಶ್ರೀಲಕ್ಷ್ಮೀ ರಂಗನಾಥಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷ ಎಚ್.ಡಿ.ರಂಗಯ್ಯ, ಮರುಳಸಿದ್ದ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net