ಇಂದಿರಾ ಕ್ಯಾಂಟೀನ್ ಬಡವರ ಆಶಾಕಿರಣ

CHANDRAPPA M mla
Published on

ಹೊಳಲ್ಕೆರೆ: ಬಡವರಿಗೆ ಉಪಯೋಗವಾಗಲೆಂದು ಇಂದಿರಾ ಕ್ಯಾಂಟೀನ್ ಕೇಂದ್ರಗಳನ್ನು ರಾಜ್ಯದ ಎಲ್ಲೆಡೆ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಾಸಕ ಎಂ ಚಂದ್ರಪ್ಪ ತಿಳಿಸಿದರು.

ಪಟ್ಟಣದ ಹಳೇ ಪುರಸಭೆಯಲ್ಲಿ ಗುರುವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿ, ಕ್ಷೇತ್ರದ ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಪ್ರತಿ ಹಳ್ಳಿಯಲ್ಲಿ ಕುಡಿಯುವ ನೀರು, ವಿದ್ಯುತ್, ದಿನಸಿ ಹಾಗೂ ವೈದ್ಯಕೀಯ ಸೌಲಭ್ಯ ತಲುಪಿಸುವ ಮೂಲಕ ಕೋವಿಡ್ 19 ಹರಡದಂತೆ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳು ಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net