ಪರೀಕ್ಷೆ ಚೆನ್ನಾಗಿ ಬರೆಯಿರಿ ಮಕ್ಕಳೆ

HLK MLA 25
Published on

ಹೊಳಲ್ಕೆರೆ: ತಾಲೂಕಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.

ತಾಲೂಕಿನ ಎಂಎಂ ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲನೆ ನಡೆಸಿದ ವೇಳೆ ಮಾತನಾಡಿ, ಪ್ರತಿ ವಿದ್ಯಾರ್ಥಿಯೂ ಪರೀಕ್ಷೆಯನ್ನು ಚೆನ್ನಾಗಿ ಬರೆದು ಉತ್ತಮ ಫಲಿತಾಂಶ ತರಬೇಕು. ನಿಮ್ಮ ಸುರಕ್ಷತೆಗಾಗಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ, ತಾಲೂಕಿನಲ್ಲಿ 2423 ಮಕ್ಕಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 132 ವಿದ್ಯಾರ್ಥಿಗಳು ಗೈರಾಗಿದ್ದರು. 43 ವಲಸೆ ವಿದ್ಯಾರ್ಥಿಗಳಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net