ಜೂಜು ಅಡ್ಡೆ ಮೇಲೆ ದಾಳಿ, 28 ಜನ ಬಂಧನ

CRIME download
Published on

ಹೊಳಲ್ಕೆರೆ: ತಾಲೂಕಿನ ವಿವಿಧೆಡೆ ಭಾನುವಾರ ಪ್ರತ್ಯೇಕ ದಾಳಿ ನಡೆಸಿದ ಪೊಲೀಸರು, 13 ಜೂಜುಕೋರರನ್ನು ಬಂಧಿಸಿ, 37,550 ರೂ. ವಶಪಡಿಸಿಕೊಂಡಿದ್ದಾರೆ.

ಶಿವಗಂಗದ ಶ್ರೀ ರಂಗನಾಥಸ್ವಾಮಿ ದೇವಾಲಯ ಸಮೀಪ ಮಧ್ಯಾಹ್ನ ಐವರನ್ನು ಬಂಧಿಸಿ, 5100 ರೂ. ವಶಪಡಿಸಿಕೊಳ್ಳಲಾಗಿದೆ.

ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆ ಪಿಎಸ್‌ಐ ಮಂಜುನಾಥ್ ಸಿದ್ದಪ್ಪ ಕುರಿ ಹಾಗೂ ಮತ್ತವರ ಸಿಬ್ಬಂದಿ ದಾಳಿ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

ದೇವರಹೊಸಹಳ್ಳಿಯಲ್ಲಿ ಬೆಳಗ್ಗೆ 8 ಜನರನ್ನು ಬಂಧಿಸಿ 32,440 ರೂ. ವಶಪಡಿಸಿಕೊಂಡಿದ್ದಾರೆ. ಹೊಳಲ್ಕೆರೆ ಸಿಪಿಐ ಕೆ.ಎನ್.ರವೀಶ್ ಮತ್ತವರ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯೂರು: ಇಲ್ಲಿನ ಶ್ರೀನಿವಾಸ ನಗರದ ಸಾರ್ವಜನಿಕ ಸ್ಥಳದಲ್ಲಿ ಭಾನುವಾರ ರಾತ್ರಿ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ದಾಳಿ ನಡೆಸಿದ ನಗರ ಪೊಲೀಸರು 6 ಜನರನ್ನು ಬಂಧಿಸಿ, 6210 ರೂ. ವಶಪಡಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐಮಂಗಲ: ಹೋಬಳಿಯ ಕಲ್ಲಹಟ್ಟಿ ಹಾಗೂ ಬುರುಜಿನರೊಪ್ಪ ಗ್ರಾಮದ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು, ಒಟ್ಟು 9 ಜನರನ್ನು ಬಂಧಿಸಿ 9,840 ರೂ. ವಶಪಡಿಸಿಕೊಂಡಿದ್ದಾರೆ. ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net