

ಹೊಳಲ್ಕೆರೆ: ಪಟ್ಟಣದಲಿ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕನ್ನಡ ಸಾಹಿತ್ಯ ಭವನದ ಉದ್ಘಾಟನೆ ಸಮಾರಂಭ ಮಾ.7ರ ಬೆಳಗ್ಗೆ 11 ಗಂಟೆಗೆ ನೆರವೇರಲಿದೆ.
ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ಉದ್ಘಾಟಿಸಲಿದ್ದಾರೆ.
ಶಾಸಕ ಎಂ.ಚಂದ್ರಪ್ಪ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಎ.ನಾರಾಯಣಸ್ವಾಮಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಮಾಜಿ ಸಚಿವ ಎಚ್.ಆಂಜನೇಯ, ಕಸಾಪ ಜಿಲ್ಲಾಧ್ಯಕ್ಷ ಡಾ.ದೊಡ್ಡಮಲ್ಲಯ್ಯ, ರಾಜ್ಯ ಸಂಚಾಲಕ ಎನ್.ಕೆ.ನಾರಾಯಣ್, ತಾಪಂ ಅಧ್ಯಕ್ಷೆ ಸುಜಾತಾ ಧನಂಜಯನಾಯ್ಕ ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕಸಾಪ ತಾಲೂಕು ಅಧ್ಯಕ್ಷ ಲೋಕೇಶ್ ತಿಳಿಸಿದ್ದಾರೆ.