ಸ್ವ-ಸಾಮರ್ಥ್ಯದಿಂದ ಉನ್ನತ ಹುದ್ದೆ ಅಲಂಕರಿಸಿ

09Kush03
ತೊರೆನೂರು ಶನೈಶ್ಚರ ದೇವಾಲಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಶಾಸಕ ಡಾ.ಮಂತರ್‌ಗೌಡ, ನಟೇಶ್‌ಗೌಡ, ನಾಗೇಶ್ ಇದ್ದರು.
Published on

ಕುಶಾಲನಗರ: ಮಹಿಳೆಯರು ಪುರುಷ ಸಮಾನವಾದ ಎಲ್ಲ ಕ್ಷೇತ್ರದಲ್ಲೂ ಭಾಗವಹಿಸುವ ಜತೆಗೆ ಉನ್ನತ ಹುದ್ದೆಯನ್ನು ಅಲಂಕರಿಸಲು ಸ್ವ-ಸಾಮರ್ಥ್ಯ ತೋರಬೇಕು ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್‌ಗೌಡ ಸಲಹೆ ನೀಡಿದರು.


ತೊರೆನೂರು ಶನೈಶ್ಚರ ದೇವಾಲಯ ಅಭಿವೃದ್ಧಿ ಸಮಿತಿ ಮತ್ತು ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಮತ್ತು ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಉನ್ನತ ಸ್ಥಾನ ಅಲಂಕರಿಸಿ ಉತ್ತಮ ಸಾಧನೆ ತೋರುತ್ತಿದ್ದಾರೆ. ಮಹಿಳಾ ದಿನದ ಅಂಗವಾಗಿ ಇಂತಹ ಸಾಧಕ ಮಹಿಳೆಯರನ್ನು ಗುರುತಿಸಿ ಅಭಿನಂದಿಸುತ್ತಿರುವುದು ಶ್ಲಾಘನೀಯ. ಯಾವುದೇ ಆತಂಕ ಇಲ್ಲದೆ ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಂಡಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದರು.


ಕೊಡ್ಲಿಪೇಟೆ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಮನುಷ್ಯನ ಬದುಕಿನಲ್ಲಿ ಸಾಕಷ್ಟು ಏರಿಳಿತ ಬರುತ್ತವೆ. ಅದನ್ನೆಲ್ಲ ಮೆಟ್ಟಿ ನಿಲ್ಲಲ್ಲು ಹೆಣ್ಣು ಮಾರ್ಗದರ್ಶಕಿಯಾಗಿ ಇದ್ದೇ ಇರುತ್ತಾಳೆ. ತನ್ನ ಕುಟುಂಬದ ಯಶಸ್ಸಿಗೆ ದುಡಿಯುವ ಮಹಿಳೆಯರ ಕಾರ್ಯಕ್ಷಮತೆ ಮೆಚ್ಚುವಂತಹದ್ದು ಎಂದರು.


ವಿವಿಧ ಕ್ಷೇತ್ರದ ಸಾಧಕರಾದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಹಿರಿಯ ಸಾಹಿತಿ ಹಂಚೆಟ್ಟರ ಫ್ಯಾನ್ಸಿ ಮುತ್ತಣ್ಣ, ಕುಶಾಲನಗರ ಸರ್ಕಾರಿ ಆಸ್ಪತ್ರೆಯ ಸ್ತ್ರಿರೋಗ ತಜ್ಞೆ ಡಾ.ಪ್ರತಿಭಾ, 5 ಬಾರಿ ಕೂಡುಮಂಗಳೂರು ಗ್ರಾಪಂ ಸದಸ್ಯೆಯಾಗಿರುವ ಫಿಲೋಮಿನಾ, ಹೆಬ್ಬಾಲೆ ಗ್ರಾಪಂ ಅಧ್ಯಕ್ಷೆ ಅರುಣಾಕುಮಾರಿ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಎಎಸೈ ಕುಮಾರಿ, ತೊರೆನೂರು ಪ್ರೌಢಶಾಲಾ ಶಿಕ್ಷಕಿ ವಿ.ಪಿ.ಸವಿತಾ ಶಿವಕುಮಾರ್, ಕಣಿವೆ ಶಾಲಾ ಶಿಕ್ಷಕಿ ಕಸ್ತೂರಿ ಪಾಂಡುರಂಗ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ವಿ.ಪಿ.ಶಶಿಧರ್, ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್, ಕಾಂಗ್ರೆಸ್ ಮುಖಂಡ ನಟೇಶ್‌ಗೌಡ, ಕೊಡಗು ವಿವಿಯ ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹಮದ್, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮೋಹನ್ ರಾಜ್, ನೀರು ಬಳಕೆದಾರರ ಸಂಘದ ಅಧ್ಯಕ್ಷ ಟಿ.ಕೆ.ಪಾಂಡುರಂಗ, ಸೂರ್ಯೋದಯ ಸಂಘದ ಅಧ್ಯಕ್ಷ ಜಗದೀಶ್, ಶನೈಶ್ಚರ ದೇವಾಲಯ ಸಮಿತಿಯ ಕಾರ್ಯದರ್ಶಿ ಕೆ.ಎಸ್.ಕೃಷ್ಣೇಗೌಡ, ಮನುಕುಮಾರ್ ಗೌಡ, ಶಿರಂಗಾಲ ದೇವಾಲಯ ಸಮಿತಿಯ ಚಂದ್ರಶೇಖರ್, ಹೆಬ್ಬಾಲೆ ಗ್ರಾಪಂ ಮಾಜಿ ಅಧ್ಯಕ್ಷ ಮಂಜುನಾಥ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net