

* ಬಿಡಿಸಿಸಿ ನಿರ್ದೇಶಕರಾಗಿ ಆಯ್ಕೆಯಾಗಲು ತೆರೆಮರೆಯಲ್ಲಿ ಕಸರತ್ತು
* ರಂಗೇರಲಿದೆ ಬಿಡಿಸಿಸಿ ಬ್ಯಾಂಕ್ ಚುನಾವಣಾ ಕಣ
ವೀರೇಂದ್ರ ನಾಗಲದಿನ್ನಿ ಹೊಸಪೇಟೆ
ಅವಿಭಾಜಿತ ಬಳ್ಳಾರಿ ಜಿಲ್ಲಾ ವ್ಯಾಪ್ತಿಯನ್ನು ಹೊಂದಿರುವ ಬಿಡಿಸಿಸಿ ಬ್ಯಾಂಕ್‌ಗೆ ಚುನಾವಣೆ ಘೋಷಣೆಯಾಗಿದ್ದು, ದಿನದಿಂದ ದಿನಕ್ಕೆ ರಾಜಕೀಯ ರಂಗು ಪಡೆಯುತ್ತಿದೆ. ಈ ಹಿಂದೆ ಸಚಿವ, ಶಾಸಕರಾದವರು, ಹಾಲಿ ಶಾಸಕರೂ ಸಹಕಾರಿ ರಂಗದ ಚುನಾವಣಾ ಅಖಾಡಕ್ಕೆ ಇಳಿಯತ್ತಿರುವುದು ಸಾರ್ವಜನಿಕ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ.
ಬಳ್ಳಾರಿ- ವಿಜಯನಗರ ಜಿಲ್ಲೆಯ ೧೧ ತಾಲೂಕು ವ್ಯಾಪ್ತಿಯನ್ನು ಹೊಂದಿರುವ ಬಳ್ಳಾರಿ ಜಿಲ್ಲಾ ಸಹಕಾರಿ ಸಂಘಕ್ಕೆ ಈಗಾಗಲೇ ಚುನಾವಣಾ ವೇಳಾ ಪಟ್ಟಿ ಪ್ರಕಟಗೊಂಡಿದೆ. ಸೆ.೩೦ ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊAಡಿದ್ದು, ಈವರೆಗೆ ೧೩ ನಾಮಪತ್ರಗಳು ಸಲ್ಲಿಕೆಯಾಗಿವೆ. ಅದರಲ್ಲಿ ಬುಧವಾರ ಒಂದೇ ದಿನ ೮ ಜನರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಅ. ೭ರಂದು ಕೊನೆಗೊಳ್ಳಲಿದೆ. ಅ. ೧೫ ಮತದಾನ ಹಾಗೂ ಅಂದೇ ಫಲಿತಾಂಶ ಪ್ರಕಟಗೊಳ್ಳಲಿದೆ.
೪ ಕ್ಷೇತ್ರಗಳ ೧೪ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಆ ಪೈಕಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಕ್ಷೇತ್ರದಿಂದ ೧೧, ಕೃಷಿ ಉತ್ಪನ್ನ ಮಾರಾಟ ಕ್ಷೇತ್ರ, ಪತ್ತಿನ ಹಾಗೂ ಪಟ್ಟಣ ಸಹಕಾರಿ ಬ್ಯಾಂಕುಗಳ ಕ್ಷೇತ್ರ, ಇತರೆ ಸಹಕಾರಿ ಸಂಘಗಳ ಕ್ಷೇತ್ರದಿಂದ ತಲಾ ಒಂದು ಸ್ಥಾನಕ್ಕೆ ಆಯ್ಕೆ ಮಾಡಲಾಗುತ್ತದೆ. ಆನಂತರ ನಿರ್ದೇಶಕರಿಂದ ಅಧ್ಯಕ್ಷ ಹಾಗೂ ಓರ್ವ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.
ಬಿಡಿಸಿಸಿ ಅಧೀನದಲ್ಲಿರುವ ಅಖಂಡ ಬಳ್ಳಾರಿ ಜಿಲ್ಲೆಯ ೩೧೫ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ತಲಾ ಒಬ್ಬ ಪ್ರತಿನಿಧಿಯನ್ನು ಆಯ್ಕೆ ಮಾಡಿದ್ದು, ಅವರನ್ನು ಅಂತಿಮ ಮತದಾರರು ಎಂದು ಗುರುತಿಸಲಾಗಿದೆ. ಅವರಲ್ಲಿ ೧೪ ಜನರನ್ನು ನಿರ್ದೇಶಕರನ್ನು ಆಯ್ಕೆ ಮಾಡಲಾಗುತ್ತದೆ. ಜಿಲ್ಲೆಯ ಒಬ್ಬರು ಹಾಲಿ ಶಾಸಕಿ, ಇಬ್ಬರು ಮಾಜಿ ಶಾಸಕರು ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ, ಅಧ್ಯಕ್ಷರಾಗಿ ತೆರೆಮರೆಯಲ್ಲಿ ಕಸರತ್ತು ನಡೆಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಉಮೇದುವಾರಿಜೆ ಸಲ್ಲಿಸಲು ತಯಾರಿ
ಮುಂಚೆಯಿAದಲೂ ಸಹಕಾರಿಗಳಾಗಿ ಶಾಸಕರಾಗಿದ್ದ ಸಿರಗುಪ್ಪದ ಟಿ.ಎಂ.ಚಂದ್ರಶೇಖರಯ್ಯ, ಹರಪನಹಳ್ಳಿಯ ಎಂ.ಪಿ.ರವೀಂದ್ರ, ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಚಿವ ಆನಂದ ಸಿಂಗ್ ಅವರು ಬ್ಯಾಂಕ್‌ನ ನಿರ್ದೇಶಕರಾಗಿ, ಅಧ್ಯಕ್ಷರಾಗಿದ್ದರು. ಅವರನ್ನೊರತಾಗಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಗಾಧಿ ರಾಜಕಾರಣಿಗಳಿಂದ ಬಹುದೂರ ಎಂಬ ಮಾತಿತ್ತು. ಈ ಬಾರಿಹಾಲಿ ಮತ್ತು ಮಾಜಿ ಶಾಸಕರು ಬಿಡಿಸಿಸಿ ಬ್ಯಾಂಕ್ ಚುನಾ ಚಣಾ ಅಖಾಡಕ್ಕಿಳಿಯುವ ಸಾಧ್ಯತೆಗಳಿವೆ.
ಹರಪನಹಳ್ಳಿ ಪಕ್ಷೇತರ ಶಾಸಕ ಎಂ.ಪಿ. ಲತಾ ಮಲ್ಲಿಕಾರ್ಜುನ, ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ, ಮಾಜಿ ಶಾಸಕ ಭೀಮಾನಾಯ್ಕ ಈಗಾಗಲೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರತಿನಿಧಿಯಾ ಗಿದ್ದಾರೆ. ಬಿಡಿಸಿಸಿ ಬ್ಯಾಂಕ್ ಮತದಾರರ ಪಟ್ಟಿಯಲ್ಲೂ ಹೆಸರು ಬಂದಿದೆ.
ಮಾಜಿ ಶಾಸಕ ದಿ.ಎಂ.ಪಿ.ರವೀಂದ್ರ ಕೂಡಾ ಬ್ಯಾಂಕ್‌ನ ಅಧ್ಯಕ್ಷರಾಗಿದ್ದರು. ಅವರ ಸಹೋದರಿ ಎಂ.ಪಿ.ಲತಾ ಕೂಡಾ ರವೀಂದ್ರ ಅವರ ಹಾದಿಯಲ್ಲಿ ಹೆಜ್ಜೆಹಾಕುತ್ತಿದ್ದಾರೆ. ಈಗಾಗಲೇ ಶಾಸಕಿಯಾಗಿದ್ದು, ಬ್ಯಾಂಕ್‌ಗೆ ಆಯ್ಕೆಯಾಗುವ ಮೂಲಕ ಸಹಕಾರಿ ರಂಗದಲ್ಲೂ ತಮ್ಮ ಛಾಪು ಮೂಡಿಸುವ ಪ್ರಯತ್ನದಲ್ಲಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಪಿ.ಟಿ.ಪರಮೇಶ್ವ ನಾಯ್ಕ ಮತ್ತು ಮಾಜಿ ಶಾಸಕರೂ ಆದ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ ಬಿಡಿಸಿಸಿ ಗಾದಿ ಮೇಲೆ ಕಣ್ಣಿಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ತಮ್ಮ ಪ್ರಭಾವ ವೃದ್ಧಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಹಾಲಿ ಮತ್ತು ಮಾಜಿ ಶಾಸಕರು ಗುರುವಾರ, ಶುಕ್ರವಾರ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಬಿಡಿಸಿಸಿ ಬ್ಯಾಂಕ್‌ಗೆ ನಮ್ಮ ಸಹೋದರ ಎಂ.ಪಿ.ರವೀಂದ್ರ ಕೂಡಾ ಅಧ್ಯಕ್ಷರಾಗಿದ್ದರು. ನಾನು ಬಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧೆ ಬಯಸಿದ್ದೇನೆ. ಶುಕ್ರವಾರ ನಾಮಪತ್ರ ಸಲ್ಲಿಸುತ್ತೇನೆ. ನಿರ್ದೆಶಕರಾಗಿ ಆಯ್ಕೆಯಾದ ಬಳಿಕ ಅಧ್ಯಕ್ಷ ಸ್ಥಾನದ ಮಾತು. - ಎಂ.ಪಿ.ಲತಾ, ಹರಪನಹಳ್ಳಿ ಶಾಸಕಿ.