ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ

V Srinivasprasad
Published on

ಮೈಸೂರು: ಸಂಸದ ವಿ.ಶ್ರೀನಿವಾಸಪ್ರಸಾದ್ ನಿಧನದ ಹಿನ್ನೆಲೆಯಲ್ಲಿ ಏ.30 ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪೂರ್ವ ನಿಗದಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ ಸರ್ಕಾರಿ, ಅನುದಾನ ಪಡೆಯುವ ಎಲ್ಲ ವಿದ್ಯಾ ಸಂಸ್ಥೆಗಳಿಗೂ ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರ ಸಾರ್ವಜನಿಕ ರಜೆ ಘೋಷಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ-1 ಎಚ್.ಬಿ.ವಿಜಯ್‌ಕುಮಾರ್ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net