ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ಆಗಸ್ಟ್ 20ರಂದು ರಜೆ

Screenshot_2025-08-19-21-49-50-71.jpg
Published on

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 20 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ. ಈ ಆಗಸ್ಟ್ 20 ರ ರಜಾ ದಿನವನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಲು ಸಂಬಂಧಿಸಿದ ಇಲಾಖೆ ಮುಖ್ಯಸ್ಥರಿಗೆ ಆದೇಶದಲ್ಲಿ ಅವರು ನಿರ್ದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net