

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಕಮ್ಮರಡಿ ರಾಘವೇಂದ್ರಸ್ವಾಮಿ ಮಠದಲ್ಲಿ ಬ್ರಾಹ್ಮಣ ಸಂಘದಿAದ ಸೆ.12ರ ಬೆಳಗ್ಗೆ ಗಾಯತ್ರಿ ಹೋಮ, ನರಸಿಂಹ ಹೋಮ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11ಕ್ಕೆ ಪೂರ್ಣಾಹುತಿ ನೆರವೇರಲಿದೆ. 11.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ತುಂಬ್ರಮನೆ ಚಂದ್ರಶೇಖರ್, ಎನ್‌ಇಎಸ್ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅವರನ್ನು ಸನ್ಮಾನಿಸಲಾಗುವುದು ಎಂದುಕಮ್ಮರಡಿ ಘಟಕದ ಅಧ್ಯಕ್ಷೆ ಲಕ್ಷಿ÷್ಮÃ ಶ್ರೀಕಂಠ ಭಟ್ ತಿಳಿಸಿದ್ದಾರೆ.