

ಸಿರಿಗೆರೆ: ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಶ್ರದ್ಧಾಂಜಲಿ ಸಮಾರಂಭ ಹಿನ್ನೆಲೆ ಶನಿವಾರ ಬೆಳಗ್ಗೆ 6.30ಕ್ಕೆ ಐಕ್ಯ ಮಂಟಪದಲ್ಲಿ ಸಾಮೂಹಿಕ ಪ್ರಾರ್ಥನೆ, ವಿದ್ಯಾರ್ಥಿಗಳಿಂದ ಶಿವ ಮಂತ್ರ ಲೇಖನ ಬರೆಸಲಾಗುವುದು.
ಬೆಳಗ್ಗೆ 9.30ಕ್ಕೆ ಗುರು ಶಾಂತೇಶ್ವರ ದಾಸೋಹ ಭವನದಲ್ಲಿ ರಕ್ತದಾನ, ನೇತ್ರ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.
11 ಗಂಟೆಗೆ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ವಚನ, ನೃತ್ಯ, ಜನಪದ, ಕಿರು ನಾಟಕ, ಏಕಪಾತ್ರ ಅಭಿನಯ, ಆಶುಭಾಷಣ ಸ್ಪರ್ಧೆ, ಚಿತ್ರಕಲೆ, ರಸಪ್ರಶ್ನೆ, ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಸಂಜೆ 4ಕ್ಕೆ ಶಿವಕುಮಾರ ಶಿವಾಚಾರ್ಯ ಶ್ರೀಗಳ ಭಾವಚಿತ್ರದ ಮೆರವಣಿಗೆಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆಸಲಾಗುವುದು.
ಸಂಜೆ 6 ಗಂಟೆಗೆ ಆಯೋಜಿಸಿರುವ ಸಭಾ ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ,
ಕೆ.ಎಚ್.ಮುನಿಯಪ್ಪ, ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಡಾ.ಎಂ.ಚಂದ್ರಪ್ಪ, ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಭಾಗವಹಿಸಲಿದ್ದಾರೆ.
ವಿಶ್ವೇಶ್ವರಿ ಹಿರೇಮಠ್ ಮತ್ತು ಸಂಗಡಿಗರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಧಾರವಾಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ಹಾಗೂ ನೃತ್ಯ ರೂಪಕ ಇರಲಿದೆ.
ಈ ಎಲ್ಲ ಕಾರ್ಯಕ್ರಮದ ಸಾನ್ನಿಧ್ಯವನ್ನು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ.