

ರಾಯಚೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಸರಳ ರೀತಿಯಲ್ಲಿ ಶನಿವಾರ ಆಚರಿಸಲಾಯಿತು.
ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ರೇಣುಕಾಚಾರ್ಯ ವೃತ್ತದಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಮತ್ತು ಜಂಗಮ ಸಮಾಜದಿಂದ ರೇಣುಕಾಚಾರ್ಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು. ನಂತರ ವೀರಶೈವ ಮಹಾಂತೇಶ ಕಲ್ಯಾಣ ಮಂಟಪದಲ್ಲಿ ಸರಳ ರೀತಿಯಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು.
ಇದಕ್ಕೂ ಮುಂಚೆ ತಾಲೂಕು ಜಂಗಮ ಸಮಾಜದಿಂದ ಸೋಮವಾರಪೇಟೆ ಹಿರೇಮಠದಿಂದ ರೇಣುಕಾಚಾರ್ಯ ವೃತ್ತದವರೆಗೆ ಬೈಕ್ ರ‌್ಯಾಲಿ ನಡೆಸಲಾಯಿತು. ವೃತ್ತದಲ್ಲಿ ಸಮಾಜದ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟಿಗೆಗೆ ಚಾಲನೆ ನೀಡಲಾಯಿತು.
ಜಿಲ್ಲಾಡಳಿತದಿಂದ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರೇಣುಕಾಚಾರ್ಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾಕಾರಿ ಅಶೋಕ ದುಡಗುಂಟಿ, ತಹಸೀಲ್ದಾರ ಸುರೇಶ ವರ್ಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ ಉಪಸ್ಥಿತರಿದ್ದರು.
ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ, ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಮಂಗಳವಾರ ಪೇಟೆ ಹಿರೇಮಠದ ವೀರ ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಭೂಪಾಲ ನಾಡಗೌಡ, ಬಸವ ಕೇಂದ್ರದ ಅಧ್ಯಕ್ಷ ರಾಚನಗೌಡ ಕೋಳೂರು, ಸಮಾಜದ ಮುಖಂಡರಾದ ಪಂಪಾಪತಿ ಶಾಸಿ, ಶಿವಕುಮಾರ ಚುಕ್ಕಿ, ಅಶೋಕ ಪಾಟೀಲ್, ಎಸ್.ವಿಜಯಕುಮಾರ ಪಾಟೀಲ್, ವೀರಯ್ಯಸ್ವಾಮಿ ಆಶಾಪುರ, ಪ್ರಭು ಶಾಸಿ, ಶರಣಬಸವ ಹಿರೇಮಠ, ವಿಜಯಕುಮಾರ ಸಜ್ಜನ್ ಉಪಸ್ಥಿತರಿದ್ದರು.