ಉಜಿರೆ ಗ್ರಾಪಂಗೆ ಹೊಂಬೆಳಕು ಗೌರವ

New Project (25)
Published on

ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಕಾರದೊಂದಿಗೆ ಗ್ರಾಮ ಸ್ವರಾಜ್ ಪ್ರತಿಷ್ಠಾನ ಮತ್ತು ಹೊಂಬೆಳಕು ಕ್ರೀಡಾಕೂಟ ಸಂಘಟನಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಫೆ.22ರಂದು ಮಂಗಳೂರಲ್ಲಿ ನಡೆದ ಕಾರ್ಯಕ್ರಮದಲ್ಲಿ 2024-25ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ನರೇಗಾ ಯೋಜನೆಯಲ್ಲಿ ಅತಿಹೆಚ್ಚು ಮಾನವ ದಿನಗಳನ್ನು ಸೃಜಿಸಿರುವ ಸಾಧನೆಯನ್ನು ಗುರುತಿಸಿ ಉಜಿರೆ ಗ್ರಾಮ ಪಂಚಾಯಿತಿಯನ್ನು ಗೌರವಿಸಲಾಯಿತು.

ಹೊಂಬೆಳಕು ಸಂಘಟನಾ ಸಮಿತಿಯ ಅಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಗ್ರಾಮ ಸ್ವರಾಜ್ ಪ್ರತಿಷ್ಠಾನ ಅಧ್ಯಕ್ಷ ಕೆ.ಸುಭಾಶ್ಚಂದ್ರ ಶೆಟ್ಟಿ ಇತರ ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನ ಸ್ವೀಕರಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯಿತಿ ಸದಸ್ಯರಾದ ಮಾಜಿ ಅಧ್ಯಕ್ಷ ಬಾಲಕೃಷ್ಣಗೌಡ, ನಾಗೇಶ್ ರಾವ್, ಸಚಿನ್, ಜಗನ್ನಾಥ ರೈ, ಅನಿಲ್ ಪ್ರಕಾಶ್ ಡಿಸೋಜ, ದಿನೇಶ್, ಪ್ರೇಮಲತಾ, ಜೆನೆಟ್, ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net