

ಉಡುಪಿ: ಪೊಲೀಸ್ ಸಿಬ್ಬಂದಿಯಂತೆಯೇ ಗೃಹರಕ್ಷಕ ದಳದ ಸಿಬ್ಬಂದಿ ಬಂದೋಬಸ್ತ್ ಕಾರ್ಯದಲ್ಲಿ ತೊಡಗಿಕೊಳ್ಳುತ್ತಾರೆ. ಆದರೆ, ಅವರಿಗೆ ಸರ್ಕಾರಿ ಸೌಲಭ್ಯಗಳು ಇಲ್ಲ. ಹೀಗಾಗಿ ಪೊಲೀಸ್ ನೇಮಕಾತಿ ಸಂದರ್ಭದಲ್ಲಿ ಗೃಹರಕ್ಷಕರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಡಾ. ರೋಷನ್ಕುಮಾರ್ ಶೆಟ್ಟಿ ಆಶಯ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಾರ್ಷಿಕ ವೃತ್ತಿಪರ ಕ್ರೀಡಾಕೂಟದ ಸಮಾರೋಪದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು.