ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಅಪಘಾತ

Untitled(1)
Published on

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿರುವ ಘಟನೆ ಭದ್ರಾವತಿ ಜಂಕ್ಷನ್ ಬಳಿ ನಡೆದಿದೆ.

ಸಚಿವರ ಬೆಂಗಾವಲು ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ಸ್ವಕ್ಷೇತ್ರ ತೀರ್ಥಹಳ್ಳಿಗೆ ಬರುತ್ತಿದ್ದರು ಎನ್ನಲಾಗಿದೆ.

ಸಚಿವರಿಗೆ ಬೆಂಗಾವಲು ನೀಡುತ್ತಿದ್ದ ವಾಹನಕ್ಕೆ, ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಬೆಂಗಾವಲು ವಾಹನಕ್ಕೆ ಹಾನಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net