ಕೋಟ ಠಾಣೆಗೆ ಗೃಹಸಚಿವ ಪರಮೇಶ್ವರ ಭೇಟಿ, ಪರಿಶೀಲನೆ

sachivaru
ಕೋಟ ಪೊಲೀಸ್ ಠಾಣೆಗೆ ಭೇಟಿ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್.
Published on

ಕೋಟ: ಕೋಟ ಪೊಲೀಸ್ ಠಾಣೆಗೆ ಶನಿವಾರ ಭೇಟಿ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಅಲ್ಲಿರುವ ಕಡತಗಳನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಠಾಣಾಧಿಕಾರಿ ರಾವೇಂದ್ರ ಸಚಿವರಿಗೆ ಮಾಹಿತಿ ನೀಡಿದರು.

ಸಾಮಾಜಿಕ ಕಾರ್ಯಕರ್ತ ಡಾ.ಎಂ.ವಿ.ಹೊಳ್ಳ, ಠಾಣೆಯಲ್ಲಿ ಪೊಲೀಸ್ ವಾಹನ ಕೊರತೆ ಇರುವ ಬಗ್ಗೆ ಸಚಿವರ ಗಮನಕ್ಕೆ ತಂದರು. ಹೆದ್ದಾರಿ ಬ್ಯಾರಿಕೇಡ್ ಅವಾಂತರ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಸಮಾಲೋಚಿಸಿ ಸುಗಮ ಸಂಚಾರ ವ್ಯವಸ್ಥೆಗೆ ಅನುವು ವಾಡಿಕೊಡುವಂತೆ ಮನವಿ ವಾಡಿದರು. ಸಮಸ್ಯೆಗಳನ್ನು ಆಲಿಸಿದ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ಶೀಘ್ರವೇ ನೇಮಕಾತಿ ಮಾಡಿ ಸಿಬ್ಬಂದಿ ಕೊರತೆ ನೀಗಿಸುವ ಭರವಸೆ ನೀಡಿದರು.

ಠಾಣೆಯಲ್ಲಿ ಸಚಿವರಿಗೆ ವಿಶೇಷ ಪೊಲೀಸ್ ಗೌರವ ಸಲ್ಲಿಸಲಾಯಿತು. ಹಿರಿಯ ಪೊಲೀಸ್ ಅಧಿಕಾರಿಗಳಾದ ಐಜಿಪಿ ಅಮಿತ್ ಸಿಂಗ್, ಎಸ್ಪಿ ಹರಿರಾಂ ಶಂಕರ್, ಎಎಸ್ಪಿ ಪರಮೇಶ್ವರ್, ಪೊಲೀಸ್ ಅಧಿಕಾರಿಗಳಾದ ಡಿ.ಟಿ.ಪ್ರಭು, ಎಚ್.ಡಿ.ಕುಲಕರ್ಣಿ, ಬ್ರಹ್ಮಾವರ ಠಾಣೆ ಪಿಎಸ್‌ಐ ಗೋಪಿಕೃಷ್ಣ, ಕೋಟ ಉಪನಿರೀಕ್ಷಕ ರಾವೇಂದ್ರ ಸಿ.ಕೋಟ, ಎಸ್‌ಐ ಸುಧಾ ಪ್ರಭು ಮತ್ತು ಸಿಬ್ಬಂದಿ ಹಾಗೂ ಕಾಂಗ್ರೆಸ್ ಪ್ರಮುಖರಾದ ಅಬ್ದುಲ್ ಗಫೂರ್, ಮುನಿಯಾಲು ಉದಯಕುವಾರ ಶೆಟ್ಟಿ, ಮಲ್ಯಾಡಿ ಶಿವರಾಮ ಶೆಟ್ಟಿ, ಗೋಪಾಲ ಪೂಜಾರಿ, ರಾಜು ಪೂಜಾರಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net