ಮುಸ್ಲಿಂರಿಗೆ ಹಿಂದಿನ ಸರ್ಕಾರದಿಂದ ಆತಂಕ ಇತ್ತು: ಗೃಹ ಸಚಿವ ಪರಮೇಶ್ವರ

Param_Muslim
Published on

ತುಮಕೂರು: ಎಲ್ಲೋ ಒಂದು ಕಡೆ ಮುಸ್ಲಿಂರಿಗೆ ಹಿಂದಿನ ಸರ್ಕಾರದಿಂದ ಆತಂಕ ಇತ್ತು. ಭಯದ ವಾತಾವರಣ ಇತ್ತು. ಹಾಗಾಗಿ, ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತಹಾಕಿದ್ದಾರೆ. ಕಾಂಗ್ರೆಸ್ ಜ್ಯಾತ್ಯಾತೀತವಾದ ಪಕ್ಷವಾಗಿದ್ದು ಅವರು ನಮ್ಮ ಜತೆ ನಿಂತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಕೊರಟಗೆರೆಯ ಈದ್ಗಾ ಮೈದಾನದಲ್ಲಿ ಗುರುವಾರ ಬಕ್ರೀದ್ ಹಬ್ಬದಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂರ ಆಶೀರ್ವಾದದಿಂದಲೇ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಅಭಿವೃದ್ಧಿ ಜತೆಗೆ ಶಾಂತಿ ಕಾಪಾಡಬೇಕಿದೆ. ಗೃಹ ಸಚಿವನಾಗಿ ಶಾಂತಿ ಕಾಪಾಡುವ ಕೆಲಸ ಮಾಡುತ್ತೇನೆ. ದ್ವೇಷ ಸಾಧಿಸಲು ಹೋಗೋದಿಲ್ಲ. ನಮ್ಮ ರಾಜದಲ್ಲಿ ಶಾಂತಿ ನೆಲಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂಧರು.

ಬಕ್ರೀದ್ ಹಬ್ಬ ತ್ಯಾಗ, ಬಲಿದಾನದ ಸಂಕೇತ. ಮಹಮ್ಮದ್ ಇಬ್ರಾಹಿಂ ತನ್ನ ಮಗನನ್ನೇ ಅಲ್ಲಾನಿಗೆ ಬಲಿ ಕೊಟ್ಟಿದ್ದ. ಅಂತಹ ಬಲಿದಾನದ ಸಂಕೇತ ಈ ಬಕ್ರಿದ್ ಹಬ್ಬ. ಎಲ್ಲರಿಗೂ ಶುಭ ಕಾಮನೆ ಹೇಳಿದ್ದೇನೆ. ಭಾರತ ಶಾಂತಿ ನಂಬಿದ ದೇಶ, ಸಂವಿಧಾನದಲ್ಲೇ ಅದನ್ನು ಅಳವಡಿಸಿಕೊಂಡಿದ್ದೇವೆ. ಸೌಹಾರ್ದದಿಂದ ಎಲ್ಲರೂ ಬಾಳಿ ಬದುಕುವ ವಾತಾವರಣವನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net