ಹನಿಟ್ರ್ಯಾಪ್​ ಪ್ರತಿಕ್ರಿಯೆಗೆ ಪರಂ ನಿರಾಕರಣೆ

HoneyTrap
Published on

ತುಮಕೂರು: ಹನಿಟ್ರ್ಯಾಪ್​  ಬಗ್ಗೆ ನಾನು ಯಾವುದೇ ಹೇಳಿಕೆ ಕೊಡಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಸ್ಫಷ್ಟ ಮಾತುಗಳಲ್ಲಿ ನಿರಾಕರಿಸಿದರು.

ನಗರದಲ್ಲಿ ಶನಿವಾರ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಎಡಿಐಪಿ ಯೋಜನೆಯಡಿ ಜಿಲ್ಲೆಯ ಕುಣಿಗಲ್​, ಶಿರಾ, ಪಾವಗಡ ತಾಲೂಕಿನ ಅಂಗವಿಕಲರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರಾ$್ಯಪ್​ ಬಗ್ಗೆ ಪ್ರತಿಕ್ರಿಯಿಸಲು ಹಿಂದೇಟು ಹಾಕಿದರು.

ಸದನದಲ್ಲಿ ಬಿಜೆಪಿ ಶಾಸಕರು ಗಲಾಟೆ ಮಾಡಿದ್ದಾರೆ. ಸ್ಪೀಕರ್​ 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ. ಅದು ಸಭಾಧ್ಯಕ್ಷರ ವಿವೇಚನೆಗೆ ಬಿಟ್ಟಿದ್ದು ನಾವು ಏನು ಮಾಡಲಿಕ್ಕೆ ಆಗೋಲ್ಲ ಎಂದಷ್ಟೇ ಹೇಳಿ ಜಾರಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net