ಕುಕ್ಕೆ ದೇಗುಲಕ್ಕೆ ಗೃಹ ಸಚಿವರ ಭೇಟಿ

New Project (3)
Published on

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗೃಹಸಚಿವ ಡಾ.ಜಿ.ಪರಮೇಶ್ವರ ದಂಪತಿ ಬುಧವಾರ ಭೇಟಿ ನೀಡಿದರು.

ದೇವಸ್ಥಾನ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ಮಹಾಪ್ರಸಾದ ನೀಡಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದಲ್ಲಿ ಆಶ್ಲೇಷ ಬಲಿ, ನಾಗಪ್ರತಿಷ್ಠಾಪನೆ ಸೇವೆ ನೆರವೇರಿಸಿದರು. ದೇವಸ್ಥಾನ ವತಿಯಿಂದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ ಗೃಹಸಚಿವರನ್ನು ಗೌರವಿಸಿದರು.

ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪ್ರಮುಖರಾದ ಕೃಷ್ಣಪ್ಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net