ಗೃಹ ಸಚಿವರ ರಾಜೀನಾಮೆಗೆ ಒತ್ತಾಯ

IMG-20240512-WA0002.jpg
Published on

ಬೆಳಗಾವಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷಪೂರ್ಣಗೊಂಡಿಲ್ಲ. ಕರ್ನಾಟಕದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದ ಜನತೆ ಭಯದಲ್ಲಿ ಬದುಕುವಂತಾಗಿದೆ. ಇದೊಂದು ಅಸಮರ್ಥ, ಅಭಿವೃದ್ಧಿ ಶೂನ್ಯ ಸರ್ಕಾರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಹರಿಹಾಯ್ದಿದ್ದಾರೆ.

ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಹಲ್ಲೆ, ಹತ್ಯೆ ನಡೆಯುತ್ತಿದ್ದು, ಅಸಮರ್ಥ ಗೃಹ ಸಚಿವರನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದರು.
 ಪ್ರತಿ ವಿಚಾರದಲ್ಲೂ ರಾಜಕೀಯ ಹುನ್ನಾರ, ಮತಬ್ಯಾಂಕ್ ಕಾರಣದಿಂದ ಕರ್ನಾಟಕ ಗೂಂಡಾ ಹಾಗೂ ಕೊಲೆಗಾರರ ರಾಜ್ಯವಾಗಿ ಪರಿವರ್ತನೆಗೊಂಡಿದೆ. ಸಿಟಿ ಕ್ರೈಂ ಬ್ಯೂರೋ ಮತ್ತು ನ್ಯಾಷನಲ್ ಕ್ರೈಂ ಬ್ಯೂರೋ  ಅಂಕಿ ಅಂಶದ ಪ್ರಕಾರ 11 ತಿಂಗಳಲ್ಲಿ ಶೇ. 70ಕ್ಕಿಂತ ಹೆಚ್ಚು ಕ್ರಿಮಿನಲ್ ಚಟುವಟಿಕೆ ರಾಜ್ಯದಲ್ಲಿ ಜಾಸ್ತಿ ಆಗಿರುವುದು ಕಂಡುಬಂದಿದೆ. ದುಷ್ಕರ್ಮಿಗಳ ವಿರುದ್ಧ ತಕ್ಕ ಕ್ರಮ ಕೈಗೊಳ್ಳದ್ದರಿಂದ ದುರ್ಘಟನೆಗಳು ಹೆಚ್ಚಾಗಿವೆ. ಹುಬ್ಬಳ್ಳಿಯ ಅಂಜಲಿ,  ನೇಹಾ ಪ್ರಕರಣ, ಬೆಳಗಾವಿಯಲ್ಲಿ ದಲಿತ ಮಹಿಳೆಯ ವಿವಸಗೊಳಿಸಿದ ಘಟನೆ, ರೊಟ್ಟಿ ಕೇಳಿದ ದಲಿತ ಯುವಕನ ಹತ್ಯೆ ಹೀಗೆ ಕರ್ನಾಟಕ ಅಪಾಯಕಾರಿ ಸ್ಥಿತಿಯಲ್ಲಿದೆ. ಆದ್ದರಿಂದ ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಈ ಸಂಬಂಧ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಲಿದೆ ಎಂದು 

ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net