

ಹಾವೇರಿ: ನಿಮಾರ್ಣ ಹಂತದ ಕಟ್ಟಡಕ್ಕೆ ನೀರು ಹೊಡೆಯುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಇಲ್ಲಿಯ ಉದಯ ನಗರದಲ್ಲಿ ನಡೆದಿದೆ.
ಮಂಜುನಾಥ ಶಂಭುಲಿಂಗಪ್ಪ ದೊಡ್ಡಗೌಡ್ರ (18) ಮೃತ ಯುವಕ.
ಈತ ತಮ್ಮ ನಿಮಾರ್ಣ ಹಂತದ ಕಟ್ಟಡಕ್ಕೆ ನೀರು ಹೊಡೆಯುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.