ನಾಲ್ಕನೇ ದಿನ ಪೂರೈಸಿದ ನಿವೇಶನರಹಿತರ ಪ್ರತಿಭಟನೆ

26_11_Mdy_Protest 03
Published on

ಮಂಡ್ಯ: ನಿವೇಶನಕ್ಕೆ ಗುರುತಿಸಿರುವ ಸರ್ಕಾರಿ ಭೂಮಿಯನ್ನು ವಿತರಿಸುವ ಭರವಸೆ ನೀಡಿದ್ದ ಜಿಲ್ಲಾಡಳಿತ ಕಾರ್ಯಗತಗೊಳಿಸದ ಹಿನ್ನೆಲೆಯಲ್ಲಿ ತಾಲೂಕಿನ ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವೇಶನರಹಿತರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಗುರುವಾರ ನಾಲ್ಕನೇ ದಿನ ಪೂರೈಸಿದೆ.
ಆ.12ರಿಂದ 6 ದಿನ ಅಹೋರಾತ್ರಿ ಧರಣಿ ನಡೆಸಿದ್ದ ನಿವೇಶನರಹಿತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದ ಜಿಲ್ಲಾಡಳಿತದ ಪ್ರತಿನಿಧಿಯಾಗಿ ಆಗಮಿಸಿದ್ದ ಮಂಡ್ಯ ತಹಸೀಲ್ದಾರ್, ತಾವು ನೀಡಿದ ಭರವಸೆ ಈಡೇರಿಸಲಿಲ್ಲ ಎಂದು ನಿವೇಶನರಹಿತರು ಅಳಲು ತೋಡಿಕೊಂಡರು.
ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 50 ಎಕರೆ ಸರ್ಕಾರಿ ಭೂಮಿ ಲಭ್ಯವಿದೆ. ಅದರಲ್ಲಿ ಗ್ರಾಮದ ಸರ್ವೇ ನಂ 190/ಪಿ10 ರ2 ಎಕರೆ ಭೂಮಿಯನ್ನು ನಿವೇಶನ ಯೋಗ್ಯ ಭೂಮಿ ಎಂದು ಹಿಂದಿನ ಉಪವಿಭಾಗಾಧಿಕಾರಿ ಮತ್ತು ತಹಸೀಲ್ದಾರ್ ಗುರುತಿಸಿ ಸರ್ಕಾರಕ್ಕೆ ವರದಿ ಮಾಡಿದ್ದರು. ಸಧ್ಯ ಅಳತೆ, ಹದ್ದುಬಸ್ತ್ ಮಾಡುವ ಬದಲು ಪ್ರಭಾವಿಗಳ ಒತ್ತಡಕ್ಕೆ ಮಣಿದು ದಾಖಲೆ ತಿರುಚುವ ಯತ್ನ ನಡೆಸುತ್ತಿದ್ದಾರೆ. ಆದ್ದರಿಂದ ಶೀಘ್ರವೇ ಸಮಸ್ಯೆ ಬಗಹರಿಸಿಕೊಡುವಂತೆ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net