ಕಡ್ಡಾಯ ನೋಂದಣಿಗೆ ಸೂಚನೆ

31mdk01 Yathish ullal
Published on

ಮಡಿಕೇರಿ:
ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಇತ್ತೀಚೆಗೆ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯಲ್ಲಿನ ಹೋಂ-ಸ್ಟೇ, ಹೋಟೆಲ್, ರೆಸಾರ್ಟ್‌ಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಹೋಂ-ಸ್ಟೇ, ಹೋಟೆಲ್, ರೆಸಾರ್ಟ್‌ಗಳಿಗೆ ಆಗಮಿಸುವ ಅತಿಥಿಗಳ ವಿವರಗಳನ್ನು ನೋಂದಣಿ ಪುಸ್ತಕದಲ್ಲಿ ಕಡ್ಡಾಯವಾಗಿ ನಮೂದಿಸುವುದು ಹಾಗೂ ಕಡ್ಡಾಯವಾಗಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ವೋಟರ್ ಐಡಿ ಇವುಗಳಲ್ಲಿ ಯಾವುದಾದರು ಒಂದು ಗುರುತಿನ ದಾಖಲಾತಿಯನ್ನು ಪಡೆಯುವಂತೆ ಸೂಚಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಹಾಗೂ ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೋಂ-ಸ್ಟೇ, ಹೋಟೆಲ್, ರೆಸಾರ್ಟ್‌ಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸುವುದು ಹಾಗೂ ಸಿಸಿ ಟಿವಿಯ ಒಂದು ತಿಂಗಳ ತುಣುಕುಗಳನ್ನು ಸಂಗ್ರಹಿಸುವುದು. ಹೋಂ-ಸ್ಟೇ,ಹೋಟೆಲ್,ರೆಸಾರ್ಟ್‌ಗಳಿಗೆ ಆಗಮಿಸುವ ಅತಿಥಿಗಳ ವಾಹನದ ವಿವರಗಳನ್ನು ನೋಂದಣಿ ಪುಸ್ತಕದಲ್ಲಿ ಕಡ್ಡಾಯವಾಗಿ ನಮೂದಿಸಬೇಕಾಗಿರುತ್ತದೆ.

ಹೋಂ-ಸ್ಟೇ,ಹೋಟೆಲ್,ರೆಸಾರ್ಟ್‌ಗಳಲ್ಲಿ ಯಾವುದೇ ರೀತಿಯ ರಾಜಕೀಯ ಪ್ರಚಾರಗಳನ್ನು ಮಾಡುವಂತಿಲ್ಲ. ಯಾವುದೇ ಕಾರ್ಯಕ್ರಮಗಳು ರಾಜಕೀಯ ಪ್ರೇರಿತವಾಗಿರಬಾರದು. ಕಾನೂನು ಬಾಹಿರ ಚಟುವಟಿಕೆಗಳು ನಡೆಸಬಾರದು. ಜಿಲ್ಲೆಯ ಹೋಂ-ಸ್ಟೇ ಮಾಲೀಕರು ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯ ಅಂತರ್ಜಾಲ ತಾಣ ಣಣಠಿ://ಞಚಿಡಿಟಿಚಿಣಚಿಞಚಿಣಡಿ.ಡಿ/ಞಣಣಜಿ ಮುಖಾಂತರ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು ಹಾಗೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸುವಂತೆ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net