ಬಂಟ ಸಾಧಕರಿಗೆ ಹುಟ್ಟೂರ ಸನ್ಮಾನ

New Project (11)
Published on

ಉಪ್ಪಳ: ಕಾಸರಗೋಡು ಜಿಲ್ಲಾ ಬಂಟರ ಸಂಘದ ಆಶ್ರಯದಲ್ಲಿ ತುಳುನಾಡ ಬಂಟ ಸುಪುತ್ರರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ಗುರುವಾರ ಐಲ ಶ್ರೀ ದುರ್ಗಾಪರಮೇಶ್ವರಿ ಕಲಾ ಭವನ ಬಂಟರ ಸಂಘದ ಅಧ್ಯಕ್ಷ ವಕೀಲ ಸುಬ್ಬಯ್ಯ ರೈ ಅಧ್ಯಕ್ಷತೆಯಲ್ಲಿ ಜರುಗಿತು. ತುಳುನಾಡಿನ ಕೊಡುಗೈದಾನಿ, ಕರ್ನಾಟಕ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಮತ್ತು ಅಂತಾರಾಷ್ಟ್ರೀಯ ಆರ್ಯಭಟ ಪುರಸ್ಕೃತ ಕುತ್ತಿಕ್ಕಾರು ಕೆ.ಕೆ.ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ ಜರುಗಿತು.

ಐಲ ಕ್ಷೇತ್ರದ ಪರಿಸರದಿಂದ ಕೊಂಬು ವಾದ್ಯ ಘೋಷಗಳೊಂದಿಗೆ ಅದ್ದೂರಿ ಮೆರವಣಿಗೆ ಜರುಗಿತು. ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಿದರು. ಮುಖ್ಯ ಅಭ್ಯಾಗತರಾಗಿ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಸದಸ್ಯೆ ಮಲ್ಲಿಕಾ ಪಕಳ, ಉದ್ಯಮಿ ಸಂಜೀವ ಶೆಟ್ಟಿ ತಿಂಬರ, ಜಿಲ್ಲಾ ಸಮಿತಿ ಉಪಾಧ್ಯಕ್ಷ ಚಂದ್ರಹಾಸ ರೈ ಪೆರಡಾಲ ಗುತ್ತು, ಶ್ಯಾಮಲ ಶೆಟ್ಟಿ, ಸಂಜೀವ ಶೆಟ್ಟಿ ಮೊಟ್ಟೆಕುಂಜ, ಕಿರಣ್ ಮಾಡ, ಗೋಪಾಲ ಶೆಟ್ಟಿ ಕುತ್ತಿಕಾರು, ಮಾಜಿ ಅಧ್ಯಕ್ಷ ಸದಾನಂದ ರೈ ಕಾಸರಗೋಡು, ಸುಬ್ಬಣ್ಣ ಶೆಟ್ಟಿ ಕುಚ್ಚಿಕ್ಕಾಡು, ದಾಮೋದರ ಶೆಟ್ಟಿ ಪಟ್ಲ, ನಿರಂಜನ್ ರೈ ಪೆರಡಾಲ, ವಸಂತ ರಾಜ್ ಶೆಟ್ಟಿ ಉಪಸ್ಥಿತರಿದ್ದರು. ನಾರಾಯಣ ಹೆಗ್ಡೆ ಕೋಡಿಬೈಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ರೈ ಸ್ವಾಗತಿಸಿ, ಜಿಲ್ಲಾ ಬಂಟರ ಸಂಘದ ಕೋಶಾಧಿಕಾರಿ ಚಿದಾನಂದ ಆಳ್ವ ವಂದಿಸಿದರು. ಪಟ್ಲಗುತ್ತು ದಾಮೋದರ ಶೆಟ್ಟಿ ನೇತೃತ್ವ ವಹಿಸಿದ್ದರು. ಚೇತನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಕುಮಾರಿ ಶರಣ್ಯ ರೈ ಕಳ್ಳಿಗೆ ಬೀಡು, ಪ್ರಶಂಸ ಶೆಟ್ಟಿ ತಾಲೆವು ಕುಂಜತ್ತೂರು ಅವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net