ಪ್ರಾಮಾಣಿಕ ಸೇವೆಯಿಂದ ಸಹಕಾರಿ ಏಳಿಗೆ

web1
ಅಥಣಿ ತಾಲೂಕು ಅನುದಾನಿತ ಶಾಲಾ ನೌಕರರ ಸಹಕಾರಿ ಸಂಘದ ಸರ್ವ ಸಾಧಾರಣ ಸಭೆಯನ್ನು ಉದ್ಘಾಟಿಸಿ ಸಂಘದ ಅಧ್ಯಕ್ಷ ಎಸ್.ಎಂ. ಪಾಲಬಾವಿ ಮಾತನಾಡಿದರು. ಎಂ. ಜಿ ದೇವಮಾನೆ, ಆರ್.ಎನ್.ಮುರಾರಿ ಇತರರು ಇದ್ದರು.
Published on

ಅಥಣಿ: ಸದಸ್ಯರ ಪರಸ್ಪರ ನಂಬಿಕೆ, ವಿಶ್ವಾಸ ಮತ್ತು ಸಿಬ್ಬಂದಿ ಪ್ರಾಮಾಣಿಕ ಸೇವೆಯಿಂದ ಸಹಕಾರಿ ಸಂಘಗಳು ಏಳಿಗೆ ಹೊಂದಲು ಸಾಧ್ಯ ಎಂದು ಅನುದಾನಿತ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್. ಎಂ.ಪಾಲಬಾವಿ ಹೇಳಿದರು.

ಪಟ್ಟಣದ ಎ.ಕೆ. ಪ್ರೌಢಶಾಲೆಯ ಸಭಾಂಗಣದಲ್ಲಿ ಅಥಣಿ ತಾಲೂಕು ಅನುದಾನಿತ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ 38ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಸಂಘದ ವರದಿ ವಾಚಿಸಿದರು. 300ಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಸಂಘವು 10 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದೆ.

ಸಂಘದ ಸದಸ್ಯರಿಗೆ ಶೇ.11 ರ ಬಡ್ಡಿ ದರದಲ್ಲಿ ಗರಿಷ್ಠ 16 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ನೀಡಲಾಗಿದೆ. ಸಂಘವು 2023 -24ನೇ ಸಾಲಿನಲ್ಲಿ 7,85,655 ರೂ. ನಿವ್ವಳ ಲಾಭ ಹೊಂದಿದೆ ಎಂದರು. ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಎಂ.ಜಿ. ದೇವಮಾನೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಡಳಿತ ಮಂಡಳಿ ಹಿರಿಯ ಸದಸ್ಯ ಆರ್.ಎನ್.ಮುರಾರಿ ನಿರೂಪಿಸಿದರು. ಕಾರ್ಯದರ್ಶಿ ಜಿ.ಎಸ್.ತೋಡಕರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net