

ಕುಶಾಲನಗರ:
ಪೊಲೀಸರ ಹೆಸರು ಹೇಳಿಕೊಂಡು ಹೆದರಿಸಿ ವ್ಯಕ್ತಿಯೊಬ್ಬರಿಂದ ಹಣ ವಸೂಲಿ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಐವರು ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧಿಸಿರುವುದಾಗಿ ಕೊಡಗು ಎಸ್‌ಪಿ ಕೆ. ರಾಮರಾಜನ್ ತಿಳಿಸಿದ್ದಾರೆ.
ಮಡಿಕೇರಿ ತಾಲೂಕು ಹಾಲೇರಿ ಗ್ರಾಮದ ಇಬ್ರಾಹಿಂ ಬಾದ್ ಷಾ (25), ಮೇಲುಕೋಟೆ ಬಳಿಘಟ್ಟ ಗ್ರಾಮದ ಬಿ.ಎಂ. ರಾಘವೇಂದ್ರ (19), ಬೆಂಗಳೂರು ಬನಶಂಕರಿಯ ಸಂಗೀತಾ (30), ಕುಶಾಲನಗರ ಆದರ್ಶ ದ್ರಾವಿಡ ಕಾಲೋನಿಯ ಸಿ.ಕೆ. ಚರಣ್ (19) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಒಬ್ಬ ಬಾಲಕನನ್ನು ಬಂಧಿಸಲಾಗಿದೆ. ಬಂಧಿತರಿAದ ಪ್ರಕರಣಕ್ಕೆ ಬಳಸಿದ 4 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ಗ್ರಾಮ ನಿವಾಸಿ ಪರಶಿವಮೂರ್ತಿ ಎಂಬುವವರು 2024ರ ಅಕ್ಟೋಬರ್‌ನಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬಕ್‌ನಲ್ಲಿ ಯಾರೋ ಒಬ್ಬರಿಗೆ ಮೇಸೆಜ್ ಮಾಡಿದ್ದರು. ನಂತರ ಅಪರಿಚಿತ ವ್ಯಕ್ತಿ ಕಳೆದ ವರ್ಷ ನ.2 ರಂದು ಪರಶಿವಮೂರ್ತಿ ಮೊಬೈಲ್‌ಗೆ ಕರೆ ಮಾಡಿ ಪಿರಿಯಾಪಟ್ಟಣ ಸೈಬರ್ ಪೊಲೀಸ್ ಎಂದು ಪರಿಚಯಿಸಿಕೊಂಡು, ನೀವು ಹುಡುಗಿಯರಿಗೆ ಸಾಮಾಜಿಕ ಜಾಲತಾಣದಲ್ಲಿ ಮೇಸೆಜ್ ಮತ್ತು ಕಮೆಂಟ್ ಮಾಡಿ ಟಾರ್ಚರ್ ನೀಡಿರುವ ಕುರಿತು ದೂರು ದಾಖಲಾಗಿರುತ್ತದೆ. ನೀವು ಹಣ ನೀಡಿದರೆ ಸರಿ ಮಾಡುತ್ತೇನೆ ಇಲ್ಲವಾದಲ್ಲಿ ಮನೆಯ ಬಳಿ ಬಂದು ಕರೆದುಕೊಂಡು ಹೋಗಿ ಜೈಲಿಗೆ ಹಾಕುತ್ತೇನೆ ಹಾಗೂ ಅಕ್ಕ-ಪಕ್ಕದವರ ಮನೆಯ ಮುಂದೆ ನಿನ್ನ ಮಾನಮರ್ಯಾದೆ ಹೋಗುವಂತೆ ಮಾಡುತ್ತೇನೆ ಎಂದು ಹಲವು ಬಾರಿ ಟೊಬೈಲ್‌ಗೆ ಕರೆ ಮಾಡಿ ಹೆದರಿಸಿದ್ದಾನೆ. ನಂತರ ಸುಮಾರು 7 ಲಕ್ಷ ರೂ. ಹಣ ಪಡೆದುಕೊಂಡಿದ್ದಾನೆ. ಈ ಸಂಬAಧ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಜ.11ರಂದು ಪ್ರಕರಣ ದಾಖಲಾಗಿತ್ತು.
ಈ ಸಂಬAಧ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪ ಪಿ.ಚಂದ್ರಶೇಖರ್, ಇನ್ಸ್ಪೆಕ್ಟರ್ ಬಿ.ಜಿ. ಪ್ರಕಾಶ್, ಪಿಎಸ್‌ಐ ಗೀತಾ ನೇತೃತ್ವದ ತಂಡ ತನಿಖೆ ನಡೆÀಸಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.