ಹೊನ್ನಕೇರಿಮಲ್ಲಯ್ಯ ಮೂರ್ತಿ ಪ್ರತಿಷ್ಠಾಪನೆ ಮೇ 1ರಂದು

NRGL TEMPLE
Published on

ನರೇಗಲ್ಲ: ಸಮೀಪದ ಕೋಟುಮಚಗಿ ಗ್ರಾಮದಲ್ಲಿ ನೂತವಾಗಿ ನಿರ್ವಣಗೊಂಡಿರುವ ಹೊನ್ನಕೇರಿಮಲ್ಲಯ್ಯ ದೇವಸ್ಥಾನ, ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಸಮಾರಂಭವು ಮೇ 1ರಂದು ಜರುಗಲಿದೆ.

ಏ. 26ರಂದು ಶ್ರೀ ಹೊನ್ನಕೇರಿಮಲ್ಲಯ್ಯಮೂರ್ತಿ ಹಾಗೂ ನವಗ್ರಹ ಮೂರ್ತಿ ಕಳಸವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗುವುದು. ಮೇ 1ರಂದು ಬೆಳಗ್ಗೆ 6-13 ನಿಮಿಷಕ್ಕೆ ದೇವಸ್ಥಾನದ ಉದ್ಘಾಟನೆ, ಪೂಜೆ ಬಳಿಕ ಶ್ರೀ ಹೊನ್ನಕೇರಿಮಲ್ಲಯ್ಯ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಲಿದೆ.

ನರೇಗಲ್ಲ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಅಡ್ನೂರ ಬ್ರಹನ್ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಜೆ 6 ಗಂಟೆಗೆ ಧರ್ಮ ಸಭೆ ಜರುಗಲಿದೆ.

ಹಾಲಕೆರೆಯ ಮುಪ್ಪಿನ ಬಸವಲಿಂಗ ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಸ್ವಾಮೀಜಿ, ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠ ಶಾಂತವೀರ ಸ್ವಾಮೀಜಿ, ನರೇಗಲ್ಲ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ವೀರೇಶ್ವರ ಪುಣ್ಯಾಶ್ರಮ ಕಲ್ಲಯ್ಯಜ್ಜನವರು, ನಂದಿವೇಮಠದ ನಿರಂಜನ ಶಿವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ಮಹಾದ್ವಾರ ಉದ್ಘಾಟಿಸುವರು. ಸಚಿವ ಎಚ್.ಕೆ. ಪಾಟೀಲ ಸಮಾರಂಭವನ್ನು ಉದ್ಘಾಟಿಸುವರು. ಶಾಸಕ ಜಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net