ಭಾರತದಿಂದ ಅಭೂತಪೂರ್ವ ಸಾಧನೆ

Honnali, Chandrayaan-3, Landing, ISRO,
Published on

ಹೊನ್ನಾಳಿ: ಚಂದ್ರನ ದಕ್ಷಿಣ ಧ್ರುವದ ಮೇಲೆ ಭಾರತ ಹೆಜ್ಜೆ ಇಡುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಿ.ಮುರಿಗೆಪ್ಪಗೌಡ ಹೇಳಿದರು.

ಪಟ್ಟಣದ ಹಿರೇಮಠದಲ್ಲಿರುವ ಕಸಾಪ ಕಚೇರಿಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಪಂಚದ ಯಾವ ದೇಶವೂ ಮಾಡಿರದ ಸಾಧನೆಯನ್ನು ಇಸ್ರೋ ವಿಜ್ಞಾನಿಗಳು ಮಾಡಿ ತೋರಿಸುವ ಮೂಲಕ ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ ಎಂದು ಹೇಳಿದರು.

ಚಂದ್ರನ ದಕ್ಷಿಣ ಭಾಗದಲ್ಲಿ ಲ್ಯಾಂಡಿಂಗ್ ಮಾಡುವ ಮೂಲಕ ದೇಶದ 140 ಕೋಟಿ ಭಾರತೀಯರ ಕನಸು ನನಸಾಗುವಂತೆ ಮಾಡಿದ್ದಾರೆ. ವರ್ಷಾನುಗಟ್ಟಲೇ ಹಗಲು ರಾತ್ರಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳ ತಂಡಕ್ಕೆ ಪ್ರತಿಫಲ ಸಿಕ್ಕಿದೆ ಎಂದರು.

ಕಸಾಪ ತಾಲೂಕು ಘಟಕದ ನಿರ್ದೇಶಕ ಎನ್.ಕೆ. ಆಂಜನೇಯ ಮಾತನಾಡಿ, ಇಸ್ರೋ ಸಂಸ್ಥೆಯ ವಿಜ್ಞಾನಿಗಳ ಸಾಧನೆ ಅನನ್ಯವಾದುದು. ಚಂದ್ರಯಾನ-3ರ ಯಶಸ್ವಿ ಲ್ಯಾಂಡಿಂಗ್‌ನಿಂದ ಭಾರತ ವಿಶ್ವದಲ್ಲಿ ಮುಂಚೂಣಿಯಲ್ಲಿದೆ ಎಂದರು.

ಕಾರ್ಯದರ್ಶಿ ಕೆ. ಶೇಖರಪ್ಪ, ಕೋಶಾಧ್ಯಕ್ಷ ನಿಜಲಿಂಗಪ್ಪ ಮಾಡನಾಡಿದರು. ನಿಕಟಪೂರ್ವ ಅಧ್ಯಕ್ಷ ಎಂ.ಎಸ್. ರೇವಣಪ್ಪ, ಎನ್.ಎಚ್. ಗೋವಿಂದಪ್ಪ, ಕುಂದೂರು ಬಸವರಾಜಪ್ಪ, ಜಿ.ಎಚ್. ರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net