ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

Honnali, CM programme, platform, preparation,
Published on

ದಾವಣಗೆರೆ: ಹೊನ್ನಾಳಿ ತಾಲೂಕಿನ 1800 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.

ಹೊನ್ನಾಳಿಯ ಪಟ್ಟಣಶೆಟ್ಟಿ ಬಡಾವಣೆಯಲ್ಲಿ ವೇದಿಕೆ ನಿರ್ಮಾಣಕ್ಕೆ ಭೂಮಿಪೂಜೆ ಸಲ್ಲಿಸಿ, ಮಾತನಾಡಿ, ಮಾ.17ರಂದು ಮಧ್ಯಾಹ್ನ 1ಕ್ಕೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು ಎಂದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವ ಆರ್.ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ, ಸಂಸದ ಜಿ.ಎಂ.ಸಿದ್ದೇಶ್ವರ ಮತ್ತಿತರ ಗಣ್ಯರು ಆಗಮಿಸುವರು ಎಂದರು.

ನ್ಯಾಮತಿ- ಹೊನ್ನಾಳಿ ತಾಲೂಕಿನಿಂದ 50 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಸಿಎಂ, ಮಾಜಿ ಸಿಎಂ ಹಾಗೂ ಸಚಿವರು ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ವಿತರಿಸುವರು ಎಂದರು.

ಪುರಸಭೆ ಅಧ್ಯಕ್ಷೆ ಸುಮಾ ಮಂಜುನಾಥ ಇಂಚರ, ಸದಸ್ಯರಾದ ರಂಗಪ್ಪ, ಬಾಬು ಓಬಳದಾರ್, ಕೆ.ವಿ.ಶ್ರೀಧರ, ಬಗರ್‌ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಕೆ.ಇ.ನಾಗರಾಜ್, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ.ಸುರೇಶ್, ಮುಖಂಡರಾದ ಅರಕೆರೆ ನಾಗರಾಜ್, ಪ್ರಭು, ನೆಲಹೊನ್ನೆ ಮಂಜುನಾಥ್, ಚಾಟಿ ಶೇಖರಪ್ಪ, ನಿಂಗಪ್ಪ, ರಾಕೇಶ್, ಎನ್.ಎಚ್.ಗೋವಿಂದಪ್ಪ, ಎಚ್.ಬಿ.ಮೋಹನ್, ವಿಕಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net