ಹೊನ್ನಾಳಿ- ನ್ಯಾಮತಿ ತಾಲೂಕನ್ನು ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹ

Honnali, drought, region,
Published on

ಹೊನ್ನಾಳಿ: ಹೊನ್ನಾಳಿ- ನ್ಯಾಮತಿಯನ್ನು ಬರಪೀಡಿತ ತಾಲೂಕೆಂದು ಘೋಷಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗೆ ಮನವಿ ಬಳಿಕ ದೂರವಾಣಿ ಮೂಲಕ ಮಾತನಾಡಿದರು.

ಎರಡು ತಾಲೂಕುಗಳಲ್ಲಿ ಶೇ. 90ರಷ್ಟು ಬಿತ್ತನೆ ಮಾಡಿದ್ದು, ಸಕಾಲಕ್ಕೆ ಮಳೆ ಬಾರದ ಕಾರಣ ಬರ ಆವರಿಸಿದೆ. ಸಕಾಲಕ್ಕೆ ಮಳೆ ಬಾರದೆ ಬೆಳೆಗಳೆಲ್ಲ ಒಣಗಿ ಹೋಗುತ್ತಿವೆ. ಆದ್ದರಿಂದ ಎರಡು ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಬೇಕು. ಈ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಲ್ಲಿಯೂ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ರಾಜಕಿಯ ಮಾತುಕತೆ ಇಲ್ಲ: ಎರಡು ತಾಲೂಕು ಕೃಷಿ ಸ್ಥಿತಿಗತಿ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಹೊರತು ರಾಜಕೀಯವಾಗಿ ಚರ್ಚೆ ನಡೆಸಿಲ್ಲ. ಮುಂಬರುವ ಲೋಕಸಭೆ ಚುನಾವಣೆಗೆ ದಾವಣಗೆರೆಯಿಂದ ಸ್ಪರ್ಧೆ ಮಾಡಲು ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಪಕ್ಷ ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ. ಆದರೆ, ಕಾಂಗ್ರೆಸ್‌ನಿಂದ ಮಾತ್ರ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net