

ಹೊನ್ನಾಳಿ: ಪಟ್ಟಣದ ಬಿಸಿಎಂ ಇಲಾಖೆಯ ಮಟ್ರಿಕ್ ನಂತರದ ಹಾಸ್ಟೆಲ್‌ಗಳಿಗೆ ಜಿಲ್ಲಾಧಿಕಾರಿ ಗಂಗಾಧರಮೂರ್ತಿ ಗುರುವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ, ಅಡುಗೆ ಮನೆ, ಶೌಚಗೃಹ, ಕೊಠಡಿಗಳನ್ನು ಪರಿಶೀಲನೆ ನಡೆಸಿ, ವಿದ್ಯಾರ್ಥಿನಿಯರೊಂದಿಗೆ ಸಮಾಲೋಚನೆ ನಡೆಸಿದರು.
ಎಲ್ಲ ವಸತಿ ಕೊಠಡಿಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳು ಕೋಣೆ ಸ್ವಚ್ಛವಾಗಿಟ್ಟುಕೊಳ್ಳಬೇಕು. ಪರಿಸರ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಬಳಿಕ ಅಡುಗೆ ಮನೆಗೆ ಬಂದು ಪಲಾವ್‌ನ ರುಚಿ ನೋಡಿದರು. ನಂತರ ಪ್ರತಿನಿತ್ಯ ಇದೇ ರುಚಿ, ಶುಚಿ ಉಪಾಹಾರ ನೀಡಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜೆ.ಡಿ. ನಾಗರಾಜ್, ಉಪವಿಭಾಗಾಧಿಕಾರಿ ವಿ.ಅಭಿಷೇಕ್, ತಹಸೀಲ್ದಾರ್ ಪಟ್ಟರಾಜಗೌಡ, ಬಿಸಿಎಂ ಇಲಾಖೆ ಅಧಿಕಾರಿ ಮೃತ್ಯುಂಜಯ ಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಉಮಾ, ಪುರಸಭೆ ಮುಖ್ಯಾಧಿಕಾರಿ ಲೀಲಾವತಿ, ಸುಧೀರ್ ಇತರರಿದ್ದರು.