ಲಾಕ್‌ಡೌನ್ ಒಂದೇ ಪರಿಹಾರವಲ್ಲ

GM Siddesh (1)
Published on

ಹೊನ್ನಾಳಿ: ಕರೊನಾ ಸಮಸ್ಯೆಗೆ ಲಾಕ್‌ಡೌನ್ ಒಂದೇ ಪರಿಹಾರವಲ್ಲ. ಜನರು ಎಚ್ಚೆತ್ತುಕೊಳ್ಳದ ಹೊರತು ವೈರಸ್ ನಿಯಂತ್ರಣ ಅಸಾಧ್ಯ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.

ತಾಲೂಕಿನಲ್ಲಿ ಸೋಮವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಶಾಸಕರ ನಿವಾಸಕ್ಕೆ ತೆರಳಿ ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಜನರು ದೈಹಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸಬೇಕು. ಸೋಂಕಿನ ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕಿರುವವರು ಇತರರಿಂದ ದೂರವಿರಬೇಕು ಎಂದರು.

ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಎಸ್ಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ ಹೊರತು ಪ್ರತಿಷ್ಠೆಗಲ್ಲ, ಎಲ್ಲರನ್ನು ಪಾಸ್ ಮಾಡುವುದು ಸರಿಯಾದ ಕ್ರಮವಲ್ಲ. ಅವರವರ ಅಧ್ಯಯನ ಸಾಮರ್ಥ್ಯದ ಮೇಲೆ ಪಾಸಾಗಬೇಕು ಎಂದರು.
ಪೆಟ್ರೋಲ್ ಬೆಲೆ ಏರಿಕೆ ವಿಚಾರವಾಗಿ ಕಾಂಗ್ರೆಸ್ ಮುಖಂಡರು ಸರ್ಕಾರದ ಅನುಮತಿ ಪಡೆಯದೇ ಗುಂಪುಗೂಡಿ ಪ್ರತಿಭಟಿಸುವುದು ಸರಿಯಲ್ಲ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ನನಗೆ ಭಯವಿದೆ: ನನಗೆ ಕರೊನಾ ಭಯವಿದೆ. ಆದರೆ ಶಾಸಕ ರೇಣುಕಾಚಾರ್ಯ ಅವರಿಗೆ ಯಾವುದೇ ಭಯವಿಲ್ಲ. ಹೀಗಾಗಿ ಅವರು ಎಲ್ಲೆಡೆ ಓಡಾಡುತ್ತಿದ್ದಾರೆ. ಪಾಸಿಟಿವ್ ಇರುವವರ ಮನೆಗೆ ಹಾಗೆಲ್ಲ ಹೋಗಬಾರದು ಎಂದು ಸಂಸದರು ಕಿವಿಮಾತು ಹೇಳಿದರು.

ದಾವಣಗೆರೆ ಸ್ಮಾರ್ಟ್‌ಸಿಟಿ ಕಾಮಗಾರಿಯಲ್ಲಿ ಕಳಪೆ ಕಂಡು ಬಂದರೆ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆಯಲಾಗುವುದು.

> ಜಿ.ಎಂ.ಸಿದ್ದೇಶ್ವರ ,ಸಂಸದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net