ಪ್ರತಿಯೊಬ್ಬರಲ್ಲೂ ಇರಲಿ ಸಾಮಾಜಿಕ ಕಳಕಳಿ

Davanagere Honnali, nyamathi, Corona, Awareness, Felicitate,
Published on

ಹೊನ್ನಾಳಿ: ಸಾಮಾಜಿಕ ಕಳಕಳಿ ಹಾಗೂ ಬದ್ಧತೆ ಇದ್ದರೆ ಸಮಾಜಸೇವೆ ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ, ಸಾಹಿತಿ ಪ್ರೇಮಕುಮಾರ್ ಬಂಡಿಗಡಿ ಹೇಳಿದರು.

ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳಲ್ಲಿ ಕರೊನಾ ಬಗ್ಗೆ ಜಾಗೃತಿ ಮೂಡಿಸಿದ ಸಾಮಾಜಿಕ ಕಾರ್ಯಕರ್ತ ಸುರೇಶ್ ಹೊಸಕೇರಿ ದಂಪತಿಗೆ ಪಟ್ಟಣದ ವೀರಸೈನಿಕ ಪ್ರತಿಮೆ ಬಳಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸುರೇಶ್ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಆರೋಗ್ಯ ಕಾಳಜಿ ಬಗ್ಗೆ ಮನವರಿಕೆ ಮಾಡಿದ್ದಾರೆ. ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಕರೊನಾ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.

ನಿವೃತ್ತ ಪ್ರಾಚಾರ್ಯ ಎಸ್.ಎ.ಹುಡೇದ್ ಮಾತನಾಡಿದರು. ಬಿಜೆಪಿ ಮುಖಂಡ ಶಾಂತರಾಜ್ ಪಾಟೀಲ್, ಇಂಜಿನಿಯರ್ ದೇವರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net