ಹೊನ್ನಾಳಿ -ನ್ಯಾಮತಿ ತಾಲೂಕು ಅಭಿವೃದ್ಧಿ ವಿಚಾರದಲ್ಲಿ ರಾಜಿ ಇಲ್ಲ

Honnali, Nyamati, Taluk, Development,
Published on

ಹೊನ್ನಾಳಿ: ಹೊನ್ನಾಳಿ -ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ಧಿಗೆ ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಶ್ರಮಿಸಲಾಗುವುದು ಎಂದು ಶಾಸಕ ಡಿ.ಜಿ. ಶಾಂತನಗೌಡ ಭರವಸೆ ನೀಡಿದರು.

ತಾಲೂಕಿನ ನೆಲಹೊನ್ನೆ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಉದ್ಘಾಟಿಸಿ, ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಅವಳಿ ತಾಲೂಕಿನ ಸಮಸ್ಯೆ ತಿಳಿದುಕೊಳ್ಳುವುದಕ್ಕಾಗಿಯೇ ನಾನು ಹಂತಹಂತವಾಗಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸುತ್ತಿದ್ದೇನೆ ಎಂದರು.

ಎಲ್ಲ ಇಲಾಖೆಯ ಅಧಿಕಾರಿಗಳ ಸಭೆಗಳು ಮುಗಿದ ಬಳಿಕ ಪ್ರತಿ ಗ್ರಾಮಕ್ಕೆ ಸ್ವತಃ ಆಗಮಿಸಿ ಇಲ್ಲಿ ಆಗಬೇಕಾದ ಎಲ್ಲಾ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪಟ್ಟಿ ಮಾಡಿಕೊಂಡು ಹಂತಹಂತವಾಗಿ ಅಭಿವೃದ್ಧಿಗೆ ಮುಂದಾಗುತ್ತೇನೆ.

ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ ಎಂದರು.
ಅವಳಿ ತಾಲೂಕಿನ ಜನತೆ ಅತೀ ಹೆಚ್ಚು ಮತ ನೀಡಿ ನನ್ನನ್ನು ಆಯ್ಕೆ ಮಾಡಿದ್ದಾರೆ. ಅವರಿಗೆಲ್ಲ ನಾನು ಚಿರಋಣಿ ಎಂದರು.

ಸುಖಾಸುಮ್ಮನೆ ಟೀಕೆ

ಚುನಾವಣೆಗೂ ಮುಂಚೆ ನಮ್ಮ ಪಕ್ಷ ನೀಡಿದ್ದ ಎಲ್ಲ ಭರವಸೆ ಈಡೇರಿಸಲಿದೆ. ಅದರಲ್ಲಿ ಅನುಮಾನ ಬೇಡ. ವಿಪಕ್ಷದವರು ಉದ್ದೇಶಪೂರ್ವಕವಾಗಿ ನಮ್ಮ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಟೀಕೆ ಮಾಡುತ್ತಿದ್ದಾರೆ.

ಇದಕ್ಕೆ ಯಾರೂ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿ, ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಅಕ್ಕಿ ಕೊಡುವ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ.

ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ದಾವಣಗೆರೆಯಲ್ಲಿ ಮಂಗಳವಾರ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆಂಗಲಹಳ್ಳಿ ಷಣ್ಮುಖಪ್ಪ, ಕಾಂಗ್ರೆಸ್ ಮುಖಂಡರಾದ ಬಿ. ಸಿದ್ದಪ್ಪ, ಎಚ್.ಎ. ಉಮಾಪತಿ, ಹನುಮಂತಪ್ಪ, ಮರುಳಸಿದ್ದಪ್ಪ, ರೇವಣಸಿದ್ದಪ್ಪ, ಎಂ.ಆರ್. ಮಹೇಶ್, ನೆಲಹೊನ್ನೆ ಮೋಹನ್, ಏಕಾಂತಪ್ಪ, ಎನ್.ಎಚ್. ಕರಿಯಪ್ಪ, ಗ್ರಾಪಂ ಅಧ್ಯಕ್ಷ ಬಸವರಾಜಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net