ಶಿಕ್ಷಕರು ಪ್ರಾತಃಸ್ಮರಣಿಯರು

Honnali, Teacher's Day,
Published on

ಹೊನ್ನಾಳಿ: ಶಿಕ್ಷಕರು ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ ಸತ್ಪ್ರಜೆಯಾಗಿ ರೂಪಿಸಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಸಲಹೆ ನೀಡಿದರು.

ಪಟ್ಟಣದ ಹಿರೇಕಲ್ಮಠದ ಸಮುದಾಯ ಭವನದಲ್ಲಿ ಮಂಗಳವಾರ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿ, ಶಿಕ್ಷಣ ಇಲಾಖೆ ಸಮಾಜದಲ್ಲಿ ಭ್ರಷ್ಟಾಚಾರ ರಹಿತ ಪ್ರಾಮಾಣಿಕವಾಗಿ ಸೇವೆ ನೀಡುತ್ತದೆ ಎಂದು ಹೇಳಿದರು.

ಮಾಜಿ ಶಿಕ್ಷಣ ಸಚಿವ ಗೋವಿಂದೇಗೌಡ ಅವರು ಅಧಿಕಾರಾವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ನೇಮಕ ಮಾಡಿಕೊಂಡಿದ್ದರು. ಅದರಲ್ಲಿ ಶೇ. 50 ರಷ್ಟು ಮಹಿಳೆ ಉದ್ಯೋಗ ಲಭಿಸಿದ್ದು ವಿಶೇಷ. ಆದ್ದರಿಂದ, ಪ್ರತಿ ಶಿಕ್ಷಕರು ಅವರನ್ನು ಸ್ಮರಿಸಬೇಕು ಎಂದರು.

ಶಿಕ್ಷಕರ ಬಹುದಿನಗಳ ಬೇಡಿಕೆಯಾದ ಹಳೇ ಪಿಂಚಿಣಿ ಪದ್ಧತಿ ಮುಂದುವರಿಸಲು ಮುಖ್ಯಮಂತ್ರಿ ಬಳಿ ಚರ್ಚೆ ನಡೆಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಮುಂದಿನ ವರ್ಷ ಒಪಿಎಸ್ ಜಾರಿ ಮಾಡುವ ಭರವಸೆ ನೀಡಿದ್ದಾರೆ ಎಂದರು.

ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ತಾಯಿ ಮೊದಲು ಗುರು. ನಂತರ ಶಾಲೆಯಲ್ಲಿ ಶಿಕ್ಷಕರು ಗುರುವಿನ ಸ್ಥಾನ ತುಂಬುತ್ತಾರೆ. ಮನುಷ್ಯನನ್ನು ನಾಗರಿಕರನ್ನಾಗಿ, ಸಮಾಜದ ಆಸ್ತಿಯನ್ನಾಗಿ ರೂಪಿಸುತ್ತಾರೆ ಎಂದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಧನಂಜಯ ಉಪನ್ಯಾಸ ನೀಡಿ, ಪ್ರತಿ ಶಿಕ್ಷಕರು ನಿತ್ಯ ವಿದ್ಯಾರ್ಥಿಗಳಾಗಬೇಕು. ಆಗ ಮಾತ್ರ ಬೋಧನೆ ಗುಣಾತ್ಮಕ ಆಗಲಿದೆ. ಮಕ್ಕಳ ಕಲಿಕಾ ಗುಣಮಟ್ಟವಾಗಿ ಇರಲಿದೆ ಎಂದರು.

ಹಿರೇಕಲ್ಮಠದ ಶ್ರೀ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು.

ನ್ಯಾಮತಿ ತಹಸೀಲ್ದಾರ್ ಆರ್.ವಿ.ಕಟ್ಟಿ, ಬಿಇಒ ನಂಜರಾಜು, ಬಿಆರ್‌ಸಿ ತಿಪ್ಪೇಶಪ್ಪ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರುದ್ರಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಆರ್.ಪಾಟೀಲ್, ಶಿಕ್ಷಕರ ಸಂಘದ ಅಧ್ಯಕ್ಷೆ ನೀಲಮ್ಮ, ತಾಲೂಕು ದೈಹಿಕ ನಿರ್ದೇಶಕ ಕೆ.ಎಸ್.ಈಶ್ವರಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಅರುಣ್‌ಕುಮಾರ್, ಶಿಕ್ಷಕಿಯರಾದ ಸೌಮ್ಯಶ್ರೀ, ರಂಜಿತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net