ಹೊನ್ನಾಳಿ- ನ್ಯಾಮತಿಯ 94 ಕೆರೆಗಳ ಭರ್ತಿಗೆ ಸಿಎಂ ಅನುಮತಿ

RENUKACHARYA MP
Published on

ಹೊನ್ನಾಳಿ: ನ್ಯಾಮತಿ -ಹೊನ್ನಾಳಿ ತಾಲೂಕಿನ ಬಹು ನಿರೀಕ್ಷಿತ 94 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮತಿ ನೀಡಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

ಕರ್ನಾಟಕ ನೀರಾವರಿ ನಿಗಮದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 435 ಕೋಟಿ ರೂ.ಅನುದಾನ ಮಂಜೂರು ಮಾಡಿದ್ದು ಶೀಘ್ರವೇ ಟೆಂಡರ್ ಕರೆಯಲಾಗುತ್ತ ದೆ ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

ನ್ಯಾಮತಿ ತಾಲೂಕಿನ ಗೋವಿನಕೋವಿ ಬಳಿ ಜಾಕ್‌ವೆಲ್ ನಿರ್ಮಿಸಿ 0.419 ಟಿಎಂಸಿ ಅಡಿ ನೀರನ್ನು 68 ಕೆರೆಗಳಿಗೆ, ಹನುಮಸಾಗರ ಬಳಿ ಜಾಕ್‌ವೆಲ್ ನಿರ್ಮಿಸಿ 0.156 ಟಿಎಂಸಿ ಅಡಿ ನೀರನ್ನು 26 ಕೆರೆಗಳಿಗೆ ಹರಿಸಲಾಗುವುದು.

ಹಿರೇಗೋಣಿಗೆರೆ, ಬೆನಕನಹಳ್ಳಿ ಏತ ನೀರಾವರಿ ಯೋಜನೆಯಡಿ ಬೆನಕನಹಳ್ಳಿ ಸಮೀಪ ಎರಡು ಜಾಕ್‌ವೆಲ್ ನಿರ್ಮಿಸಿ 18 ಕೆರೆಗಳಿಗೆ ನೀರು ತುಂಬಿಸಲಾಗುವುದು. ಇದಕ್ಕೆ ಸರ್ಕಾರ 42.50 ಲಕ್ಷ ರೂ. ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಸುರೇಶ್, ತಾಂಡಾ ಅಭಿವೃದ್ಧಿ ನಿಗಮದ ನಿರ್ದೇಶಕ ಮಾರುತಿ ನಾಯ್ಕ, ನ್ಯಾಮತಿ ತಾಪಂ ಅಧ್ಯಕ್ಷ ರವಿಕುಮಾರ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಎರಡೂ ತಾಲೂಕಿನಲ್ಲಿ ಹನಿನೀರಾವರಿಗೆ 550 ಕೋಟಿ ರೂ, ಗೋವಿನಕೋವಿ - ರಾಂಪುರ ನಡುವೆ ಸೇತುವೆ ನಿರ್ಮಾಣಕ್ಕೆ 110 ಕೋಟಿ ರೂ. ಬಿಡುಗಡೆಗೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆ. ಇದಕ್ಕೆ ಸ್ಪಂದಿಸಿ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದರು.

ಚುನಾವಣೆ ಮುಂಚೆ ಅವಳಿ ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಭ ರವಸೆ ನೀಡಿದ್ದೆ. ಈಗ ಅದರಂತೆ ನಡೆದುಕೊಳ್ಳುತ್ತಿದ್ದೇನೆ. ಇದಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಸಹಕಾರವಿದೆ.
> ಎಂ.ಪಿ.ರೇಣುಕಾಚಾರ್ಯ, ಸಿಎಂ ರಾಜಕೀಯ ಕಾರ್ದರ್ಶಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net