ಮುರಾರ್ಜಿ ಶಾಲೆ ಕಾಮಗಾರಿ ಪರಿಶೀಲನೆ

hnl mpr july 09
Published on

ಹೊನ್ನಾಳಿ: ತಾಲೂಕಿನ ಅರಬಗಟ್ಟೆ ಗ್ರಾಮದ ಬಳಿ ನಿರ್ಮಿಸುತ್ತಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಗುರುವಾರ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟ ಪರಿಶೀಲಿಸಿದರು.

ಬಳಿಕ ಸುದ್ದಿಗಾರೊಂದಿಗೆ ಮಾತನಾಡಿ, 16 ಎಕರೆಯಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಎರಡು ಮುರಾರ್ಜಿ ದೇಸಾಯಿ ವಸತಿ ಶಾಲಾ ಕಟ್ಟಡ ನಿರ್ಮಿಸುತ್ತಿದ್ದು, ಒಂದೊಂದರಲ್ಲಿ 250ರಂತೆ ಐನೂರು ವಿದ್ಯಾರ್ಥಿಗಳ ವಸತಿಯುತ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಧ್ಯಕ್ಕೆ ಬಾಡಿಗೆ ಕಟ್ಟಡಗಳಲ್ಲಿ ತಾಲೂಕಿನ ವಸತಿ ಶಾಲೆಗಳು ನಡೆಯುತ್ತಿದ್ದು, ಆದಷ್ಟು ಬೇಗ ಕಾಮಗಾರಿ ಮುಗಿಸಿ ಕಟ್ಟಡಗಳನ್ನು ಬಳಕೆಗೆ ಮುಕ್ತಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಿದ್ದೇನೆ. ಕೆಲಸ ಮುಗಿದ ಕೂಡಲೇ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net